BREAKING NEWS /ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Jul 23, 2023 SHIVAMOGGA NEWS 

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬೆಳಗ್ಗೆಯಿಂದಲೂ ಮಳೆಯ ರಭಸ ಜೋರಾಗಿದೆ. ಜಿಲ್ಲೆಯ ಹಲವೆಡೆ ವ್ಯಾಪಕ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಈ ನಿಟ್ಟಿನಲ್ಲಿ ನಾಳೆ ಅಂದರ ಜುಲೈ 24 ರಂದು  ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತದ ಸೂಚನೆ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.  

ಏನಿದೆ ಪ್ರಕಟಣೆಯಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ. ರವರ ಸೂಚನೆ ಮೇರೆಗೆ ದಿನಾಂಕ:24/07/2023 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದೆ.

ಉಪನಿರ್ದೇಶಕರು (ಆಡಳಿತ),

ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ.

Malenadu Today Shivamogga

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​ 

 

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor