MALENADUTODAY.COM |SHIVAMOGGA| #KANNADANEWSWEB
ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾರ್ಚ್ 25ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ದಾವಣಗೆರೆ ನಗರದ ಜಿ.ಎಂ.ಐ.ಟಿ ಕಾಲೇಜಿನ ಪಕ್ಕದಲ್ಲಿರುವ 400 ಹೆಕ್ಟೇರ್ ಜಾಗದಲ್ಲಿ ಈ ಸಮಾವೇಶ ನಡೆಯಲಿದೆ. ಕಾರ್ಯಕ್ರಮದ ಸೂಕ್ತ ನಿರ್ವಹಣೆಯ ಜವಾಬ್ದಾರಿಯನ್ನ ಜಿಲ್ಲಾಡಳಿತ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ವಿವಿಧ ತಂಡಗಳಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯುವರ ದಾವಣಗೆರೆ ಭೇಟಿಯ ರೂಟ್ ಮ್ಯಾಪ್ನಲ್ಲಿ ಕುತೂಹಲವೊಂದು ಮೂಡಿದೆ. ಏಕೆಂದರೆ, ದಾವಣಗೆರೆ ಕಾರ್ಯಕ್ರಮಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಮತ್ತೊಮ್ಮೆ ಬರಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಶಿವಮೊಗ್ಗಕ್ಕೆ!
- ಯುಗಾದಿ ಹಬ್ಬದ ಬೆನ್ನಲ್ಲೆ ಮಾರ್ಚ್ 25ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾವೇಶಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮೊದಲು ಬೆಂಗಳೂರಿಗೆ ಬರಲಿದ್ದಾರೆ.
- ಮಾರ್ಚ್ 25ರಂದು ಬೆಳಗ್ಗೆ 7.40 ಕ್ಕೆ ನವದೆಹಲಿ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆ ವಿಮಾನದಲ್ಲಿ ಹೊರಡಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10.10ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
- ಅಲ್ಲಿಂದ 10.15 ಕ್ಕೆ ಹೆಲಿಕಾಪ್ಟರ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ಪ್ರಧಾನಿ 10.35ಕ್ಕೆ ಚಿಕ್ಕಬಳ್ಳಾಪುರ ತಲುಪಲಿದ್ದಾರೆ. 10.45 ರಿಂದ 12 ಗಂಟೆಯ ನಡುವಿನ ಸಮಯದಲ್ಲಿ ಮದುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯನ್ನು ಉದ್ಘಾಟನೆ ಮಾಡಲಿದ್ದಾರೆ.
- ಈ ಕಾರ್ಯಕ್ರಮದ ಬಳಿಕ ಹೆಲಿಕಾಪ್ಟರ್ ಮೂಲಕ 12.40 ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ಗಂಟೆಯಿಂದ 1.35 ರವರೆಗೆ ವೈಟ್ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟನೆ ನೆರವೇರಿಸಲಿದ್ದು, ಮೈಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.
- ಈ ಎಲ್ಲಾ ಕಾರ್ಯಕ್ರಮಗಳ ನಂತರ, ವೈಟ್ಫೀಲ್ಡ್ ಮೆಟ್ರೋ ಸ್ಟೇಷನ್ನಿಂದ ಪ್ರಧಾನಿ ನರೇಂದ್ರ ಮೋದಿ ಹೆಲಿಪ್ಯಾಡ್ಗೆ ಬೈ ರೋಡ್ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಲಿದ್ದಾರೆ.
- ಮಧ್ಯಾಹ್ನ 3.15ಕ್ಕೆ ದಾವಣಗೆರೆ ತಲುಪಲಿರುವ ಪ್ರಧಾನಿಯವರು ಅಲ್ಲಿ 3.30 ರಿಂದ 5.00 ಗಂಟೆವರೆಗೆ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
- ದಾವಣಗೆರೆಯ ಕಾರ್ಯಕ್ರಮವನ್ನು ಮುಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇರವಾಗಿ ನವದೆಹಲಿಗೆ ವಾಪಸ್ ಆಗುವುದಿಲ್ಲ. ಬದಲಾಗಿ, ದಾವಣಗೆರೆಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದು ಲ್ಯಾಂಡ್ ಆಗಲಿದ್ದಾರೆ.
- ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಜೆ 5.55ಕ್ಕೆ ಹೊರಟು ರಾತ್ರಿ 8.25ಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಹುಬ್ಬಳ್ಳಿ ಏರ್ಪೋರ್ಟ್ ಬಿಟ್ಟು ಶಿವಮೊಗ್ಗ ಏರ್ಪೋರ್ಟ್ ಆಯ್ಕೆ ಮಾಡಿದ ಪ್ರಧಾನಿ
ಇದಿಷ್ಟು ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯಪ್ರವಾಸದ ಕಾರ್ಯಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆಯಿಂದ ಹುಬ್ಬಳ್ಳಿ ವಿಮಾನ ನಿಲ್ಧಾಣಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ಹೋಗುವ ಅವಕಾಶವಿತ್ತು. ಆದಾಗ್ಯು ಅವರು, ಶಿವಮೊಗ್ಗ ಏರ್ಫೋರ್ಟ್ನ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಏರ್ಪೋರ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯುವರು ಯಾರನ್ನು ಭೇಟಿಯಾಗುವುದಿಲ್ಲ ಎನ್ನಲಾಗುತ್ತಿದೆ. ಇದರ ಹೊರತಾಗಿ ನರೇಂದ್ರ ಮೋದಿಯವರು ಶಿವಮೊಗ್ಗ ಏರ್ಫೋರ್ಟ್ಗೆ ಮತ್ತೊಮ್ಮೆ ಭೇಟಿಕೊಟ್ಟು ಅಲ್ಲಿಂದಲೇ ದೆಹಲಿಗೆ ಸಾಗುತ್ತಿರುವುದು ವಿಶೇಷ ಸಂದೇಶ ರವಾನೆ ಮಾಡಲಿದೆ.
ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನದಲ್ಲಿ ಶಿವಮೊಗ್ಗ ಏರ್ಫೋರ್ಟ್ನಲ್ಲಿ ಲ್ಯಾಂಡ್ ಆಗಿ, ಉದ್ಘಾಟಿಸಿದ್ದರು. ಆ ಬಳಿಕ ಇದೀಗ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಹಾಗು ಶಿವಮೊಗ್ಗದ ಜನರಿಗೆ ಏರ್ಪೋರ್ಟ್ನ ವಿಶೇಷತೆಯನ್ನು ಪರೋಕ್ಷವಾಗಿ ಸಾರಲಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamogga news,shivamogga,shivamogga airport,kannada news live,kannada news,shivamogga airport inauguration,shivamogga latest news,pm modi in shivamogga,latest kannada news,shivamogga mp,live news,shivamogga today news,shivamogga airport,kannada live news,karnataka latest news,kannada latest news,pm modi inaugurate shivamogga airport,shivamogga new airport,latest news,karnataka news,breaking news,shivamogga news today
