KARNATAKA NEWS/ ONLINE / Malenadu today/ May 4, 2023 GOOGLE NEWS
ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರ ಅಂತಿಮ ಘಟ್ಟಕ್ಕೆ ಬರುತ್ತಿದೆ. ಮತದಾರರ ಮನೆ ಮನ ತಲುಪುವುದಕ್ಕೂ ಅಭ್ಯರ್ಥಿಗಳು ಬಿಡುವಿಲ್ಲದ ಓಡಾಟದಲ್ಲಿ ತೊಡಗಿದ್ದಾರೆ. ಇದರ ನಡುವೆ ಕೊನೆಕ್ಷಣದಲ್ಲಿ ಕಮಾಲ್ ಮಾಡಲು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಇದೇ ಮೇ ಏಳರಂದು ಪ್ರಧಾನಿ ನರೇಂದ್ರ ಮೋದಿ ಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಪಟ್ಟಿ ಇಲ್ಲಿದೆ
ರಾಜಧಾನಿ ಬೆಂಗಳೂರುನಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ ನಂತರ ಆರನೇ ತಾರೀಖು ರಾತ್ರಿ, ಅಲ್ಲಿಯ ರಾಜಭವನದಲ್ಲಿ ಉಳಿದುಕೊಳ್ಳಲಿದ್ದಾರೆ. ಬಳಿಕ ಮರುದಿನ ಅಂದರೆ ಏಳನೇ ತಾರೀಖು ಭಾನುವಾರ ಬೆಂಗಳೂರು ಹೆಚ್ಎ ಎಲ್ ಏರ್ಪೋರ್ಟ್ ನಿಂದ ಹುಬ್ಬಳ್ಳಿಗೆ ಬೆಳಗ್ಗೆ ಒಂಬತ್ತು ಗಂಟೆಗೆ ಹೊರಡಲಿದ್ದಾರೆ.
10:10ಕ್ಕೆ ಹುಬ್ಬಳ್ಳಿಗೆ ಬಂದು ಅಲ್ಲಿಂದ ಬಾದಾಮಿಗೆ ತೆರಳಲಿದ್ಧಾರೆ. ನಂತರ ಮಧ್ಯಾಹ್ನ 12 ಗಂಟೆವರೆಗೂ ಬಾದಾಮಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೋದಿ ಅಲ್ಲಿಂದ ಹಾವೇರಿಗೆ ತೆರಳಲಿದ್ದಾರೆ. ಅಲ್ಲಿ, 2 ಗಂಟೆಯುವರೆಗೂ ಇದ್ದು ಶಿವಮೊಗ್ಗಕ್ಕೆ ಬರಲಿದ್ಧಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಆಯನೂರಿನಲ್ಲಿ ಮೋದಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ಧಾರೆ.
ಸಮಾವೇಶ ಮುಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಸಂಜೆ 4.25 ಕ್ಕೆ ಶಿವಮೊಗ್ಗ ಏರ್ಪೋರ್ಟ್ ತಲುಪಲಿದ್ಧಾರೆ. ಅಲ್ಲಿಂದ ಮೈಸೂರಿಗೆ ತೆರಳಿ, ನಂಜನಗೂಡಿಗೆ ಪ್ರಯಾಣ ಬೆಳಸಲಿದ್ದಾರೆ. ನಂತರ ರಾತ್ರಿ ದೆಹಲಿಗೆ ವಾಪಸ್ ಆಗಲಿದ್ದಾರೆ.
bajrang dal/ ಏಕಾಯೇಕಿ ನಿಷೇಧ ಮಾಡಲು ಸಾಧ್ಯವಿಲ್ಲ!
ಸಾಗರ/ ಶಿವಮೊಗ್ಗ/ ಸದ್ಯ ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಬಿಜೆಪಿ ಇದನ್ನು ದೊಡ್ಡ ಇಶ್ಯು ಮಾಡುತ್ತಿದ್ದು, ಚುನಾವಣಾ ಅಸ್ತ್ರವಾಗಿ ಬಳಕೆ ಮಾಡಿಕೊಳ್ತಿದೆ. ಇದರ ನಡುವೆ ಪ್ರಣಾಳಿಕೆಯಲ್ಲಿ ಈ ವಿಚಾರದ ಬಗ್ಗೆ ಕಾಂಗ್ರೆಸ್ನಲ್ಲಿಯೇ ಪರ ವಿರೋದ ಚರ್ಚೆಗಳು ನಡೆಯುತ್ತಿವೆ.
ಈ ಸಂಬಂಧ ಕಾಂಗ್ರೆಸ್ ಪಕ್ಷ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ರವರು ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ವ್ಯಕ್ತಪಡಿಸಿರುವ ಬಜರಂಗ ದಳ ನಿಷೇಧದ ವಿಚಾರ ಕಾನೂನಿಗೆ ಸಂಬಂಧಿಸಿದ್ದಾಗಿದೆ ಎಂದಿದ್ದಾರೆ.
ಕಾನೂನಿನಲ್ಲಿ ಇಂತಹ ಸಂಘಟನೆಗಳ ನಿಷೇಧಕ್ಕೆ ಅವಕಾಶವಿದೆಯಾ ಎನ್ನ ವುದನ್ನು ಗಮನಿಸಬೇಕಿದೆ. ಅಲ್ಲದೆ, ಮುಖ್ಯವಾಗಿ ಬಜರಂಗದಳ ಇರಬಹುದು ಇನ್ನಿತರೆ ಸಂಘಟನೆಗಳು ಇರಬಹುದು, ಯಾವುದೇ ಸಂಟನೆಯಾಗಲಿ, ಅದನ್ನು ನಿಷೇಧ ಮಾಡಬೇಕಾದರೆ ಅವುಗಳಿಂದ ಸಾಮಾಜಿಕವಾಗಿ ತೊಂದರೆ ಏನಾಗಿದೆ ಅದರ ಪರಿಣಾಮ ಮತ್ತಿತರ ಸಂಗತಿಗಳನ್ನು ಪರಿಶೀಲಿಸಿ ನಿರ್ಧಾರ ಕೈಗೂಳ್ಳಬೇಕಾಗುತ್ತದೆ. ಹೀಗೆ ಏಕಾಏಕಿ ನಿಷೇಧ ಮಾಡಲು ಸಾಧ್ಯವಿಲ್ಲ ಎಂದಿದ್ಧಾರೆ.
ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ ಸುಟ್ಟ ಕೆ.ಎಸ್.ಈಶ್ವರಪ್ಪ! ಕಾರಣ?
ಕಲಬುರಗಿ/ ಭಜರಂಗ ದಳವನ್ನು ನಿಷೇಧ ಮಾಡುವ ಪ್ರಸ್ತಾವನೆ ಇರುವ ಕಾಂಗ್ರೆಸ್ ಪ್ರಣಾಳಿಕೆಯನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುಟ್ಟುಹಾಕಿದ್ದಾರೆ. ಅಲ್ಲದೆ ಇದು ರಾಷ್ಟ್ರ ದ್ರೋಹಿ ಪ್ರಣಾಳಿಕೆಯಾಗಿದ್ದು, ಕಾಂಗ್ರೆಸ್ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ, ಮಾಧ್ಯಮಗಳ ಮುಂದೆ, ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಹಾಕಿದರು. ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ, ಧರ್ಮದ ಬಗ್ಗೆ ಕಿಡಿಕಾರುತ್ತಿದೆ.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ರನ್ನ ಬಂಧಿಸಬೇಕು
ಜಾತಿ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುತ್ತಿದೆ. ಈ ರೀತಿ ವಿಷ ಬೀಜ ಬಿತ್ತುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ನವರು ಮಾನಸಿಕ ಸ್ಥಿತಿ ಹೇಗಾಗಿದೆ ಎನ್ನುವುದು ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್ ನವರು ಹಿಂದೂ-ಮುಸ್ಲಿಂ ಚುನಾವಣೆ ಮಾಡಲು ಹೊರಟಿದ್ದಾರೆ. ನಾವೆಲ್ಲಾ ಮುಸ್ಲಿಮರು ಎಂದು ಕಾಂಗ್ರೆಸ್ ನವರು ಹೇಳಿಕೊಂಡು ತಿರುಗುತ್ತಿದ್ದಾರೆ. ನಿಮಗೆ ಬರೀ ಮುಸ್ಲಿಂ ಮತಗಳು ಮಾತ್ರ ಸಾಕಾ ? ಹಿಂದೂಗಳ ಮತ ಬೇಡ್ವಾ ಎಂದು ಪ್ರಶ್ನಿಸಿದರು.
Malenadutoday.com Social media
