ಮಲೆನಾಡು ಟುಡೆ ಸುದ್ದಿ / ಸಾಗರ / ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬೆಂಕಿಗಾಹುತಿಯಾಗಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಇಂದು ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಹಾಗೂ ಚಾಲಕ, ನಿರ್ವಾಹಕ ಸೇರಿದಂತೆ ನಾಲ್ವರೂ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.
ಆನಂದಪುರದ ಮುಂಬಾಳು ರೈಲ್ವೆ ಗೇಟ್ ಸಮೀಪ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಸಾಗರದತ್ತ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಹಾಗೂ ನಿರ್ವಾಹಕ ತಕ್ಷಣ ವಾಹನವನ್ನು ನಿಲ್ಲಿಸಿದ್ದಾರೆ. ಬಳಿಕ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕರು ಕೂಡ ಬಸ್‌ನಿಂದ ಹೊರಬಂದಿದ್ದು, ನಾಲ್ವರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬಳಿಕ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.ಈ ಮಧ್ಯೆ ವಿಷಯ ತಿಳಿದು ಅಗ್ನಿಶಾಮ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.

