BHADRAVATI

ಭದ್ರಾವತಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕಾಗೆಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಹಲವರಿಗೆ ಗಂಭೀರ ಗಾಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಭದ್ರಾವತಿ: ದಾವಣಗೆರೆಯಿಂದ ಭದ್ರಾವತಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿರುವ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಇಂದು ಸಂಭವಿಸಿದೆ . ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್​ ಆಗಿ ಎಷ್ಟಿದೆ!? ಏನಾಗ್ತಿದೆ?

ದಾವಣಗೆರೆಯಿಂದ ಹೊರಟಿದ್ದ ಈ ಬಸ್ ಚನ್ನಗಿರಿ ಮಾರ್ಗವಾಗಿ ಬರುತ್ತಿದ್ದಾಗ ಕಾಗೆಹಳ್ಳದ ಸೇತುವೆ ಬಳಿ ತಲುಪುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿದೆ . ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ ಮೂರ್ನಾಲ್ಕು ಜನರಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರ ಕಾಲು ಮುರಿದಿದ್ದು, ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ 

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.

Private Bus Falls into Kagehalla Stream 

Private Bus Falls into Kagehalla Stream 
Private Bus Falls into Kagehalla Stream 
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.