ಸಾಗರದಿಂದ ಶಿವಮೊಗ್ಗಕ್ಕೆ ಬರುವಾಗ ಅಪಘಾತಕ್ಕೀಡಾದ ಖಾಸಗಿ ಬಸ್
private bus met with an accident ,Anandapura in Sagar taluk ,Shivamogga district yesterday
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 1, 2024
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪ ನಿನ್ನೆ ಖಾಸಗಿ ಬಸ್‌ವೊಂದ ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಪೆಟ್ಟಾಗಿಲ್ಲ ಎನ್ನಲಾಗಿದೆ.
ಸಾಗರ ತಾಲೂಕಿನ ಆನಂದಪುರ ಸಮೀಪ ಸಿಗುವ ಹೊಸಗುಂದದ ತಿರುವಿನ ಬಳಿ ಬಸ್ ಅಪಘಾತಕ್ಕೀಡಾಗಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಎಸ್ ಜಿ ಎಂಟಿ ಕಂಪನಿಯ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಒಂದಷ್ಟು ದೂರ ಹೋಗಿ ನಿಂತಿದೆ.
ಘಟನೆ ನಡೆದ ಸಂದರ್ಭದಲ್ಲಿ ಬಸ್ನಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಅವರಿಗೆ ಸ್ಥಳೀಯ ಆನಂದಪುರ ಹಾಗೂ ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದೆ.
SUMMARY | A private bus met with an accident near Anandapura in Sagar taluk of Shivamogga district yesterday. The incident took place last night. According to sources, several people sustained minor injuries in the incident and did not suffer major injuries.
KEYWORDS | private bus met with an accident ,Anandapura in Sagar taluk ,Shivamogga district yesterday