ಶಿಕಾರಿಪುರ: ಖಾಸಗಿ ಬಸ್​ ಪಲ್ಟಿ 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಹಂಚಿಕೊಳ್ಳಿ
WhatsApp Facebook X Telegram
Private Bus Overturns Near Kumadvathi College
Private Bus Overturns Near Kumadvathi College

ಶಿಕಾರಿಪುರ | ಶಿಕಾರಿಪುರ ಪಟ್ಟಣದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. 

ಶಿವಮೊಗ್ಗ : ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಲಾರಿ 

ಅಪಘಾತದ ಹಿನ್ನೆಲೆ ನೋಡುವುದಾದರೆ, ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನೋರ್ವ ರಸ್ತೆಯಲ್ಲಿದ್ದ ಹಂಪ್ತಪ್ಪಿಸಲು ಆಗಿ ಬೈಕನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಆದರೆ, ಅದೇ ಕ್ಷಣದಲ್ಲಿ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಕಾರಣ, ಚಾಲಕ ಬಸ್ಸನ್ನು ಬಲಕ್ಕೆ ಚಲಾಯಿಸಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ ಉರುಳಿ ಬಿದ್ದಿದೆ.

ಈ ಭೀಕರ ಅಪಘಾತದ ಪರಿಣಾಮವಾಗಿ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಮತ್ತು ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಪೈಕಿ ಪರಿಸ್ಥಿತಿ ಗಂಭೀರವಾಗಿದ್ದ 10 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Private Bus Overturns Near Kumadvathi College 

Private Bus Overturns Near Kumadvathi College
Private Bus Overturns Near Kumadvathi College
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor