ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ / ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಏಕಾಏಕಿ ರಿವರ್ಸ್ ಆಗಿ ಸಾಗಿದಷ್ಟೆ ಅಲ್ಲದೆ, ಹಲವು ಕಾರುಗಳಿಗೆ ಡಿಕ್ಕಿ ಹೊಡೆದು, ಜಖಂ ಮಾಡಿದ ಘಟನೆ ತೀರ್ಥಹಳ್ಳಿ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ (Thirthahalli Bus Stand) ಬಳಿ ಇಂದು ಬುಧವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಅಪಾಯವಾಗಲಿಲ್ಲ . ಆಗುಂಬೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಖಾಸಗಿ ಬಸ್‌ನ ಬ್ರೇಕ್ ಫೇಲ್ ಆಗಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೆ ಪೂರ್ಣ ಮಾಹಿತಿ ಬರಬೇಕಿದೆ.
ಇಂದು ಸಂಜೆ ಇದ್ದಕ್ಕಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಬಸ್ ಏಕಾಏಕಿ ಹಿಮ್ಮುಖವಾಗಿ ಚಲಿಸಿದೆ ಎನ್ನಲಾಗಿದೆ. ಈ ವೇಳೆ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಾರುಗಳಿಗೆ ಬಸ್ ಒಂದರ ನಂತರ ಒಂದರಂತೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯ ಪರಿಣಾಮ 5ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿದ್ದು, ವಾಹನಗಳ ವಿವಿಧ ಭಾಗಗಳಿಗೆ ಹಾನಿಯಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಬಸ್ ನಿಲ್ದಾಣದ ಸಮೀಪ ಜನರು ಮತ್ತು ವಾಹನಗಳ ಸಂಚಾರವಿದ್ದರೂ ಯಾರಿಗೂ ಗಾಯವಾಗಿಲ್ಲ.
ಏಕಾಏಕಿ ಬಸ್ ಹಿಮ್ಮುಖವಾಗಿ ಚಲಿಸಿದ್ದರಿಂದ ಸ್ಥಳದಲ್ಲಿದ್ದ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದರು. ಜನರು ತಕ್ಷಣ ಸುರಕ್ಷಿತ ಸ್ಥಳಗಳಿಗೆ ಸರಿದಿದ್ದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅಪಾಯ ತಪ್ಪಿದೆ. ಘಟನೆ ಬಳಿಕ ಖಾಸಗಿ ಬಸ್ ಚಾಲಕನ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
