Private College Lecturer / ಹೊಳೆಹೊನ್ನೂರು /ಶಿವಮೊಗ್ಗ / ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಉಪನ್ಯಾಸಕರೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. 58 ವರ್ಷದ ಸುರೇಶ್ ಮೃತಪಟ್ಟವರು. ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹನುಮಂತಾಪುರ ಗ್ರಾಮದಲ್ಲಿರುವ ತಮ್ಮದೇ ಸ್ವಂತ ತೋಟದಲ್ಲಿ ಇಂದು ಬೆಳಿಗ್ಗೆ ಸುರೇಶ್ ಅವರ ಶವ, ಸುಟ್ಟು ಉರಿಯುತ್ತಿರುವ ಸ್ಥಿತಿಯಲ್ಲಿಯೇ ಪತ್ತೆಯಾಗಿದೆ. ತೋಟದ ಮಧ್ಯಭಾಗದಲ್ಲಿ ಬೆಂಕಿ ಉರಿಯುತ್ತಿರುವುದನ್ನ ಗಮನಿಸಿದ ಸ್ಥಳೀಯರು ಹತ್ತಿರ ಹೋಗಿ ನೋಡಿದಾಗ, ನಡೆದ ಘಟನೆ ಗೊತ್ತಾಗಿದೆ. ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ಕೊಲೆ ಮಾಡಿ ಶವ ತಂದು ಇಲ್ಲಿ ಸುಟ್ಟು ಹಾಕಿದ್ದಾರೆಯೋ ಎಂಬು ಅನುಮಾನ ಮೂಡಿದೆ.

ಇನ್ನೂ ವಿಷಯ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮಹಜರ್ ನಡೆಸಿದ ಪೊಲೀಸರು ಮರಣೋತ್ತರ ಪರೀಕ್ಷೆ ರವಾನಿಸಿದ್ದಾರೆ. ಸಾವಿನ ಕಾರಣವನ್ನು ಪತ್ತೆಹಚ್ಚಲು ಮುಂದಾಗಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಶುರುಮಾಡಿದ್ದಾರೆ.
ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್ ಆಗಿ ಎಷ್ಟಿದೆ!? ಏನಾಗ್ತಿದೆ?
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
Private College Lecturer Found Dead Under Suspicious Circumstances in Shivamogga
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.