ರಾಗಿಗುಡ್ಡದಲ್ಲಿ ನಿಷೇದಾಜ್ಞೆ ಜಾರಿಯಲ್ಲಿ ಇರುತ್ತದೆ! ಜಿಲ್ಲಾಡಳಿದ ಪರಿಷ್ಕೃತ ಆದೇಶದಲ್ಲಿ ಏನಿದೆ ಗೊತ್ತಾ?

Prohibition will be in effect in Ragigudda! Do you know what is in the revised order of the district administration?ರಾಗಿಗುಡ್ಡದಲ್ಲಿ ನಿಷೇದಾಜ್ಞೆ ಜಾರಿಯಲ್ಲಿ ಇರುತ್ತದೆ! ಜಿಲ್ಲಾಡಳಿದ ಪರಿಷ್ಕೃತ ಆದೇಶದಲ್ಲಿ ಏನಿದೆ ಗೊತ್ತಾ?

ರಾಗಿಗುಡ್ಡದಲ್ಲಿ  ನಿಷೇದಾಜ್ಞೆ ಜಾರಿಯಲ್ಲಿ ಇರುತ್ತದೆ! ಜಿಲ್ಲಾಡಳಿದ ಪರಿಷ್ಕೃತ ಆದೇಶದಲ್ಲಿ ಏನಿದೆ ಗೊತ್ತಾ?

KARNATAKA NEWS/ ONLINE / Malenadu today/ Oct 9, 2023 SHIVAMOGGA NEWS

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಉಂಟಾಗಿದ್ದ ಗಲಭೆ ವಾತಾವರಣ ಸಂಬಂಧ ಸ್ಥಳದಲ್ಲಿ  ಮಾತ್ರ 144 ಸೆಕ್ಷನ್ ಮುಂದುವರಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅದೇಶ ಹೊರಡಿಸಿದ್ದಾರೆ. 

 

ಅ.1ರಂದು ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ರಾಗಿಗುಡ್ಡದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಪೊಲೀಸರು ಲಾಠಿ ಚಾರ್ಜ್ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಿದ್ದರು. ಈ ವೇಳೆ ನಿಷೇದಾಜ್ಞೆ ಜಾರಿಗೊಳಿಸಿದ್ದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿತ್ತು. 

 

ಇದೀಗ  ಜಿಲ್ಲಾಧಿಕಾರಿ ಡಾ.ಸೆಲ್ವಮಣಿ  ನಿಷೇಧಾಜ್ಞೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಅದರಂತೆ  ಶಾಂತಿನಗರ ರಾಗಿಗುಡ್ಡ ಬಡಾವಣೆಗೆ ಮಾತ್ರ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಮುಂದಿನ ಆದೇಶದವರೆಗೆ ರಾಗಿಗುಡ್ಡ ಶಾಂತಿನಗರದಲ್ಲಿ ಮಾತ್ರ ನಿಷೇಧಾಜ್ಞೆ  ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ.

 

ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೆ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. ಘೋಷಣೆಗಳನ್ನು ಕೂಗುವುದು, ಪ್ರಚೋದನಕಾರಿ ಹೇಳಿಕೆ ನೀಡುವುದು, ಪ್ರಚೋದನಕಾರಿ ಪ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ ಕಟ್ಟುವುದನ್ನು ನಿಷೇಧಿಸಲಾಗಿದೆ. 

 

ಮಾರಕಾಸ್ತ್ರ ಸ್ಫೋಟಕ ಹೊಂದುವುದು, ಅವುಗಳನ್ನು ಹಿಡಿದು ಓಡಾಡುವುದನ್ನು ಕೂಡ ನಿಷೇಧಿಸಲಾಗಿದೆ. ಈ ಹಿಂದೆ ಅನುಮತಿ ಪಡೆದಿರುವ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ಅನುಮತಿ ಇದೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

 


ಇನ್ನಷ್ಟು ಸುದ್ದಿಗಳು 

 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ