SHIVAMOGGA NEWS TODAY

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುವಂತೆ ಡಿಮ್ಯಾಂಡ್! ಹಾವೇರಿ, ಬೆಳಗಾವಿ ಅಧಿಕಾರಿಗಳಿಂಧ ಮೈಸೂರು ವಿಭಾಗದ ಆಯುಕ್ತರಿಗೆ ಪತ್ರ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹಾವೇರಿ ಜಿಲ್ಲೆಯಾದ್ಯಂತ ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಭದ್ರಾ ಡ್ಯಾಮ್​ನಿಂದ ನೀರು ಬಿಡುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತಿರಿಗೆ ಮನವಿ ಸಲ್ಲಿಕೆಯಾಗಿದೆ.

ಪ್ರಸ್ತಾವನೆಯ ಪ್ರಮುಖ ಅಂಶಗಳು

  • ಪ್ರಸ್ತಾವನೆಯಲ್ಲಿ ಹಾವೇರಿ ಜಿಲ್ಲೆಯ ಹಾವೇರಿ, ರಾಣೆಬೆನ್ನೂರು, ಬ್ಯಾಡಗಿ, ಹಿರೇಕೆರೂರು, ರಟ್ಟಿಹಳ್ಳಿ ಹಾಗೂ ಶಿಗ್ಗಾಂವಿ ತಾಲೂಕುಗಳು ಕುಡಿಯುವ ನೀರಿಗಾಗಿ ಸಂಪೂರ್ಣವಾಗಿ ತುಂಗಭದ್ರಾ ನದಿಯನ್ನು ಅವಲಂಬಿಸಿವೆ.
  • ಪ್ರಸ್ತುತ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿರುವ ಕಾರಣ, ಈ ಭಾಗದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ.
  • ಈ ಸಮಸ್ಯೆಯನ್ನು ಬಗೆಹರಿಸಲು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುವಂತೆ ಡಿಮ್ಯಾಂಡ್

ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಭದ್ರಾ ಜಲಾಶಯದಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹಾವೇರಿ ಜಿಲ್ಲಾಧಿಕಾರಿಗಳು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಅಧಿಕೃತ ಪತ್ರದ ಮೂಲಕ ಕೋರಿದ್ದಾರೆ. ಇದಕ್ಕೂ ಮುನ್ನ 2026 ರ ಮಾರ್ಚ್ ತಿಂಗಳಿನಿಂದ ಮೇ ತಿಂಗಳವರೆಗಿನ ಅವಧಿಗೆ ಒಟ್ಟು 0.3754 ಟಿ.ಎಂ.ಸಿ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡುಗಡೆ ಮಾಡುವಂತೆ ಕೋರಲಾಗಿತ್ತು. ಈಗ ಮುಂದುವರೆದು ಮೇ 20, 2026 ರಿಂದ ಜೂನ್ 15, 2026 ರವರೆಗಿನ ಅವಧಿಗೆ ಒಟ್ಟು 0.1597 ಟಿ.ಎಂ.ಸಿ ನೀರಿನ ತುರ್ತು ಅಗತ್ಯವಿದೆ ಹಾವೇರಿ ಜಿಲ್ಲಾಧಿಕಾರಿ ತಮ್ಮ ಕೋರಿಕೆಯಲ್ಲಿ ತಿಳಿಸಿದ್ದಾರೆ.

ಈ ಪ್ರಮಾಣದ ನೀರನ್ನು ಹಂತ ಹಂತವಾಗಿ ಬಿಡುಗಡೆ ಮಾಡುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಿಂದ ಮೇ 8, 2026 ರಂದು ಹಾಗೂ ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮೇ 4, 2026 ರಂದು ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ