ಶಿವಮೊಗ್ಗದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ/ ಕಾರಣವೇನು ಗೊತ್ತಾ

ಇದೇ ರೀತಿ ಶಿಕ್ಷಣ ವಿರೋಧಿ ನೀತಿ ಮುಂದುವರೆಸಿದರೆ ವಿದ್ಯಾರ್ಥಿಗಳೊಂದಿಗೆ ಬೀದಿಗಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿ

ಶಿವಮೊಗ್ಗದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ/ ಕಾರಣವೇನು ಗೊತ್ತಾ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ನಗರದ ಸೈನ್ಸ್ ಮೈದಾನದಿಂದ  ವಿದ್ಯಾರ್ಥಿಗಳು ಎನ್.ಎಸ್.ಯು.ಐ. ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಮಹಾವೀರವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡ ಹಾಗೂ ಪದವೀಧರರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್, ಕೇಂದ್ರ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೇ ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ಅನಗತ್ಯ ತೊಂದರೆ, ಹೊರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಸಹ ಓದಿ : 15 ವರ್ಷದಿಂದ ಕಾಡು ಬಿಟ್ಟು ಬರದ ರೌಡಿ ಗಣೇಶ ಮಧ್ಯಪ್ರದೇಶಕ್ಕೆ! 6 ಮಂದಿಯನ್ನು ಕೊಂದ ಸಕ್ರೆಬೈಲ್​ ಬಿಡಾರದ ಈ ಆನೆ ಎಷ್ಟೊಂದು ಉಗ್ರ ಸ್ವರೂಪಿ ಗೊತ್ತಾ?

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಮುಖ್ಯವಾಗಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ ವಿಪರೀತ ಹೆಚ್ಚಳವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಸತಿ ಸಮಸ್ಯೆ, 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಾಗಿಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಸಮಸ್ಯೆ ಉಂಟಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ ಮಾಡುತ್ತಿಲ್ಲ.

ಕುವೆಂಪು ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾ ನಕಲು, 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನ ರದ್ದುಪಡಿಸಿರುವುದು, ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಮುಂತಾದ ಸಮಸ್ಯೆಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ ಉಂಟಾಗಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಕೂಡಲೇ ಸರ್ಕಾರಗಳು ಈ ದ್ವಂದ್ವ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಇದನ್ನು ಸಹ ಓದಿ : ರೈತರೇ ಎಚ್ಚರ, ಜೇಡಿಮಣ್ಣು ಕೊಟ್ಟು ಗೊಬ್ಬರ ಅಂತಾರೆ ...ಹುಷಾರ್..ಇಲ್ಲಿದೆ ನೋಡಿ ಸಾಕ್ಷಿ 

ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯ್ ಮಾತನಾಡಿ, ಕೂಡಲೇ ಸ್ಥಗಿತಗೊಳಿಸಿರುವ ಪದವಿ ವಿದ್ಯಾರ್ಥಿಗಳ ಲ್ಯಾಪ್‍ಟಾಪ್ ಯೋಜನೆ ಜಾರಿಗೊಳಿಸಬೇಕು. 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಪುನಃ ಜಾರಿಗೊಳಿಸಬೇಕು. ಗ್ರಾಮಾಂತರ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ, ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಬಸ್‍ಪಾಸ್ ವಿಸ್ತರಣೆ, ವಸತಿ ಶಾಲೆಗಳ ಸಮಸ್ಯೆ ಸರಿಪಡಿಸಬೇಕು. ವಾರ್ಷಿಕ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ರದ್ದುಪಡಿಸಬೇಕು. ಪರೀಕ್ಷೆ ಫಲಿತಾಂಶದಲ್ಲಿ ವಿಳಂಬ ಮಾಡಬಾರದು, ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅಗ್ರಹಿಸಿದರು.

ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ - ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಯನ್ನು ಕೈಬಿಟ್ಟು, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಕೈಬಿಡಲು ಆದೇಶ ನೀಡಬೇಕು ಎಂದು ಒತ್ತಾಯಿಸಿದರಲ್ಲದೆ, ಇದೇ ರೀತಿ ಶಿಕ್ಷಣ ವಿರೋಧಿ ನೀತಿ ಮುಂದುವರೆಸಿದರೆ ವಿದ್ಯಾರ್ಥಿಗಳೊಂದಿಗೆ ಬೀದಿಗಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ,ರವಿ ಕಾಟಿಕೆರೆ,ಚರಣ್, ಹರ್ಷಿತ್, ಚಂದ್ರೋಜಿ ರಾವ್,  ವರುಣ್ ವಿ ಪಂಡಿತ್, ರವಿ, ಶಿವು, ಉಲಾಸ್, ಪ್ರದೀಪ, ಸಾಗರ್, ಶಶಿ ,ಗಿರೀಶ್, ವಿಶಾಲ್,  ತೌಫಿಕ್, ದೇವು, ಸುಹಾಸ್, ಕುಮಾರ್, ಪ್ರಸನ್ನ, ಅಭಿ, ಪ್ರದೀಪ್, ನರೇಂದ್ರ, ಗಿ ಮಲಗೊಪ್ಪ ಶಿವು, ಧನರಾಜ್, ಗೌತಮ್, ಹೇಮಂತ್, ಬಸವರಾಜ್,  ಪುರ್ಲೆ ವೆಂಕಟೇಶ್, ಅಭಿ ಹಾಗೂ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು BJP ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

ಇದನ್ನು ಸಹ ಒದಿ :ಜನ ಸ್ವಯಂಸೇವಕರಾದ್ರು/ ರಾಜಕಾರಣಿ ಡಾಕ್ಟರ್​ ಆದ್ರು/ ಸಾಗರಿಕರ ಮಾನವೀಯತೆಗೆ ಸಾಕ್ಷಿಯಾದ ಆಕ್ಸಿಡೆಂಟ್

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link