ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ: ಎನ್.ಎಸ್.ಯು.ಐ ನಿಂದ ಬೃಹತ್ ಪ್ರತಿಭಟನೆ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ

ಹಂಚಿಕೊಳ್ಳಿ
WhatsApp Facebook X Telegram
Protest NSUI Activists Vandalize VC Office
Protest NSUI Activists Vandalize VC Office

Protest ಶಿವಮೊಗ್ಗ :ಕುವೆಂಪು ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ರ ಪ್ರತಿಭಟನೆ ನಡೆಸಿದರು. 

ಲಾಭಾಂಶದ ಆಸೆಗೆ ಬರೋಬ್ಬರಿ 53 ಲಕ್ಷ ಕಳೆದುಕೊಂಡ ಶಿವಮೊಗ್ಗ ವ್ಯಕ್ತಿ, ನಡೆದಿದ್ದೇನು

ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದ್ದಾರೆ. ವಿಶ್ವವಿದ್ಯಾಲಯದ ಆಂತರಿಕ ಕಲಹದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿರುವುದೇ ಈ ಆಕ್ರೋಶಕ್ಕೆ ಮುಖ್ಯ ಕಾರಣವಾಗಿದೆ.

ಕಳೆದ ಐದು ತಿಂಗಳ ಹಿಂದೆ ನಡೆದ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಿರುವುದು ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು 

ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯ ವೇಳೆ ಕುಲಪತಿಗಳಾದ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಅಲ್ಲಿನ ಪೀಠೋಪಕರಣ ಹಾಗೂ ನಾಮಫಲಕಗಳನ್ನು ಕಿತ್ತೆಸೆದಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಬಂದ ಭದ್ರತಾ ಸಿಬ್ಬಂದಿಯನ್ನು ವಿದ್ಯಾರ್ಥಿಗಳು ತಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ ಸೇರಿದಂತೆ ನೂರಾರು ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡು ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದರು.

Protest NSUI Activists Vandalize VC Office

Protest NSUI Activists Vandalize VC Office
Protest NSUI Activists Vandalize VC Office
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor