SHIVAMOGGA NEWS TODAY

ಶಿವಮೊಗ್ಗ: ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Protests ಶಿವಮೊಗ್ಗ: ಅಮೆರಿಕ ಮತ್ತು ಇಸ್ರೇಲ್‌ ಜಂಟಿಯಾಗಿ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಹತ್ಯೆಯಾಗಿರುವ ಘಟನೆ ಈಗ ಭಾರತದಲ್ಲೂ ದೊಡ್ಡ ಮಟ್ಟದ ಪ್ರತಿಭಟನೆಗೆ ಕಾರಣವಾಗಿದೆ. ಈ ಹತ್ಯೆಯನ್ನು ಖಂಡಿಸಿ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅಂಜುಮನ್-ಎ-ಫೈಜಾನ್-ಎ-ಹುಸೈನಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಶಿವಮೊಗ್ಗ: ಕೋಟೆ ಮಾರಿಕಾಂಬಾ ಜಾತ್ರೆಗೆ ಭರ್ಜರಿ ಸಿದ್ಧತೆ; ಮಾರಿಗದ್ದುಗೆಗೆ ಎಸ್‌.ಪಿ ನಿಖಿಲ್ ಬಿ ಭೇಟಿ.

ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ  ಅಲಿ ಖಮೇನಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸುವುದರ ಜೊತೆಗೆ, ಕಪ್ಪು ಬಾವುಟ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಹಿಡಿದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು. 

ನಂತರ ಪತ್ರಿಕಾ ಪ್ರಕಟನೆಯನ್ನು ಬಿಡುಗಡೆ ಮಾಡಿ  ಖಮೇನಿ ಅವರ ನಿಧನದಿಂದ ಜಗತ್ತಿನಾದ್ಯಂತ ಇರುವ ಅವರ ಅಭಿಮಾನಿಗಳ ಹೃದಯಗಳು ದುಃಖದಿಂದ ತುಂಬಿವೆ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಸಂತ್ರಸ್ತರ ಪರವಾಗಿ ಧ್ವನಿ ಎತ್ತುತ್ತಿದ್ದ ಹಾಗೂ ಅನ್ಯಾಯದ ಮುಂದೆ ಎಂದೂ ತಲೆಬಾಗದ ಧೈರ್ಯಶಾಲಿ ನಾಯಕ ಇಬ್ರಾಹಿಂ ಅಲಿ ಖಮೇನಿ ಅವರ ಸೇವೆ ಮತ್ತು ತ್ಯಾಗವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಅವರ ಚಿಂತನೆಗಳು ಕೇವಲ ಇರಾನ್ ದೇಶಕ್ಕೆ ಸೀಮಿತವಾಗದೆ, ಇಡೀ ಜಗತ್ತಿನ ಜನರಿಗೆ ಭರವಸೆ ಮತ್ತು ಧೈರ್ಯ ನೀಡುವಂತಿರಬೇಕು ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದರು. 

ಅಲಿ ಖಮೇನಿ ಅವರು ಇಂದು ಭೌತಿಕವಾಗಿ ನಮ್ಮನ್ನು ಅಗಲಿದ್ದರೂ, ಅವರು ತೋರಿಸಿಕೊಟ್ಟ ಮಾರ್ಗ ಮತ್ತು ಆದರ್ಶಗಳು ನಮ್ಮ ಹೃದಯದಲ್ಲಿ ಸದಾ ಜೀವಂತವಾಗಿರುತ್ತವೆ ಅವರ ಜೀವನವು ಮುಂಬರುವ ಪೀಳಿಗೆಗೆ ಸದಾ ಕಾಲ ಸ್ಫೂರ್ತಿಯಾಗಲಿದೆ ಎಂದು ಭಾಷಣದ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.

Protests Against Iranian Leader death

Protests Against Iranian Leader death
Protests Against Iranian Leader death
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.