ಸಾರ್ವಜನಿಕರ ಗಮನಕ್ಕೆ : ಇದೇ ಫೆಬ್ರವರಿ 22, 23 ಮತ್ತು 24 ಕ್ಕೆ ಶಿವಮೊಗ್ಗ ಜಿಲ್ಲೆ ಈ ಪ್ರಮುಖ ಭಾಗಗಳಲ್ಲಿ POWER CUT

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM |SHIVAMOGGA NEWS   

ಶಿವಮೊಗ್ಗ ನಗರದ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಫೆ.22 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

#KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್​ಮೀಟ್ Malenadu Today Shivamogga

ಎಲ್ಲೆಲ್ಲಿ? 

 ತುಂಗಾ ನಗರ ಚಾನಲ್, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಇಲಿಯಾಜ್ ನಗರ 1ನೇ ಕ್ರಾಸ್‍ನಿಂದ 14ನೇ ಕ್ರಾಸ್‍ರವರೆಗೆ, ಮಂಡ್ಲಿ ಕೆ.ಇ.ಬಿ ವಸತಿ ಗೃಹಗಳು, ಶಂಕರ ರೈಸ್ ಮಿಲ್ ಹಿಂಭಾಗ, 100ಅಡಿ ರಸ್ತೆ, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಎಫ್-06 ಕಲ್ಲೂರು ಗ್ರಾಮಾಂತರ ಪ್ರದೇಶ, ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ   ಹಾಗೂ ಸುತ್ತಮುತ್ತಲಿನ ಐಪಿ ಮೀಟರ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಫೆ.23 ಮತ್ತು 24 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಮತ್ತು ತುರ್ತು ಕಾಮಗಾರಿ ಇರುವ ಕಾರಣ ಫೆ.23 ಮತ್ತು 24 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor