Public Nuisance case
Shivamogga news / ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಮುಂಜಾಗ್ರತಾ ಕ್ರಮವಾಗಿ ನಿನ್ನೆ ಸಂಜೆ ಜಿಲ್ಲೆಯಾದ್ಯಂತ ಶಿವಮೊಗ್ಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಆಯಾ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡಗಳು ‘ಏರಿಯಾ ಡಾಮಿನೇಷನ್’ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಾಲ್ನಡಿಗೆ ವಿಶೇಷ ಗಸ್ತು (Foot Patrolling) ನಡೆಸಿವೆ.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ, ಸಾರ್ವಜನಿಕರಿಗೆ ತೊಂದರೆ ನೀಡಿದ (Public Nuisance) ಮತ್ತು ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ 28 ಲಘು ಪ್ರಕರಣಗಳನ್ನು ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಈ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
