ಪಿಯುಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

PUC Question Paper  ಶಿವಮೊಗ್ಗ| ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಸಂಬಂಧ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ.

ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ 

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಪ್ಪ ಅವರು ಈ ಕುರಿತು ದೂರು ನೀಡಿದ್ದಾರೆ. ಜಿಲ್ಲೆಯ ಒಂದು ಸ್ಟ್ರಾಂಗ್ ರೂಮ್ ಅಥವಾ ಎಂಟು ನೋಡಲ್ ಕೇಂದ್ರಗಳ ಪೈಕಿ ಯಾವುದಾದರೂ ಒಂದು ಕಡೆ ಪತ್ರಿಕೆ ಸೋರಿಕೆಯಾಗಿರುವ ಸಾಧ್ಯತೆಯಿದ್ದು, ಸಿಸಿಟಿವಿ ದೃಶ್ಯಾವಳಿಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. 

ಜೂನ್ 6 ರಂದು ನಡೆಯಬೇಕಿದ್ದ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆ ಆರಂಭವಾಗುವ ಮುನ್ನವೇ ಅಂದರೆ ಬೆಳಗ್ಗೆ 10.45ಕ್ಕೆ ವಾಟ್ಸಪ್‌ನಲ್ಲಿಹರಿದಾಡಿದೆ. ಈ ವಿಷಯವನ್ನು ತುಮಕೂರು ಜಿಲ್ಲೆಯ ಉಪನಿರ್ದೇಶಕರು ಗಮನಿಸಿ, ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ವಾಟ್ಸಪ್‌ನಲ್ಲಿ ಬಂದಿದ್ದ ಪ್ರಶ್ನೆ ಪತ್ರಿಕೆ ಅಸಲಿ ಪತ್ರಿಕೆಯನ್ನೇ ಹೋಲುತ್ತಿರುವುದು ದೃಢಪಟ್ಟಿದೆ. 

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ವಿಚಾರದ ಬಗ್ಗೆ ಮಾಹಿತಿ ಪಡೆದಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಜೂನ್ 17ರ ವರೆಗೆ ಇತರೆ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಮುಂದಿನ ಪತ್ರಿಕೆಗಳು ಸೋರಿಕೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

PUC Question Paper Leak Shimoga