ಶಿವಮೊಗ್ಗ : ಈ ಭಾನುವಾರ ಮಕ್ಕಳಿಗೆ ಪಲ್ಸ್​ ಪೋಲಿಯೋ ಹನಿ ಮರೆಯದೆ ಲಸಿಕೆ ಹಾಕಿಸಿ! ಇಲ್ಲಿದೆ ಡಿಟೇಲ್ಸ್​!

Pulse Polio Campaign in Shivamogga on Dec 21  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:    ಡಿ.21 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 0 ರಿಂದ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೋರಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 21 ರಂದು ಪಲ್ಸ್ ಪೋಲಿಯೋ ಅಭಿಯಾನ: ಜಿಲ್ಲಾಧಿಕಾರಿಗಳ ಕರೆ Pulse Polio Campaign in Shivamogga on Dec 21: DC Gurudatta Hegde Appeals to Parents
ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 21 ರಂದು ಪಲ್ಸ್ ಪೋಲಿಯೋ ಅಭಿಯಾನ: ಜಿಲ್ಲಾಧಿಕಾರಿಗಳ ಕರೆ Pulse Polio Campaign in Shivamogga on Dec 21: DC Gurudatta Hegde Appeals to Parents

ಜಿಲ್ಲೆಯಲ್ಲಿ 0 ರಿಂದ 5 ವರ್ಷದ ಒಳಗಿನ 145255 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.(Pulse Polio Campaign in Shivamogga on Dec 21) ಜೊತೆಗೆ ಅತೀ ಸೂಕ್ಷ್ಮ ಪ್ರದೇಶಗಳೆಂದು ಗುತುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಬಟ್ಟಿಗಳು, ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳನ್ನೊಳಗೊಂಡು ಬಸ್ಸು ನಿಲ್ದಾಣ, ರೈಲ್ವೆ ನಿಲ್ದಾಣಗಳು ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 1016 ಲಸಿಕಾ ಬೂತ್‌ಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರ ಪ್ರಕಟಣೆಯ ಮುಖ್ಯಾಂಶ/Pulse Polio Campaign in Shivamogga on Dec 21

  • ಇದರಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‌ಗಳಾಗಿ ಕಾರ್ಯನಿರ್ವಹಿಸುತ್ತಾರೆ.
  • ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗುತ್ತದೆ. 
  • ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. 
  • ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು.
  • ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು.
  •  ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು ಕರೆತಂದು   ಪೋಲಿಯೋ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಶಿವಮೊಗ್ಗ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ; ಮಹಿಳಾ ಎಎಸ್‌ಐ  ಚಿನ್ನದ ಸರ ಕಳವು

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮತ್ತು ಮೃತ ಮಹಿಳೆಯ ಚಿನ್ನ, ದುಡ್ಡಿನ ಕಥೆ!

ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 21 ರಂದು ಪಲ್ಸ್ ಪೋಲಿಯೋ ಅಭಿಯಾನ: ಜಿಲ್ಲಾಧಿಕಾರಿಗಳ ಕರೆ Pulse Polio Campaign in Shivamogga on Dec 21: DC Gurudatta Hegde Appeals to Parents