KARNATAKA NEWS/ ONLINE / Malenadu today/ May 6, 2023 GOOGLE NEWS
ಶಿವಮೊಗ್ಗ ವಿಧಾನಸಭೆ ಚುನಾವಣಾ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ, ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಭೂತ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚನೆ ನೀಡಿದರು.
ಇದೇ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಮತದಾನದ ಸಿದ್ದತೆ ಕುರಿತು ಇಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಜೊತೆ ವಿಸಿ ಮೂಲಕ ಏರ್ಪಡಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಇಓ ಗಳು ಮತಗಟ್ಟೆಗಳಲ್ಲಿ ಕನಿಷ್ಟ ಸೌಲಭ್ಯ ಭರವಸೆಗಳಾದ (ಎಎಂಎಫ್) ಶಾಮಿಯಾನ, ಕುಡಿಯುವ ನೀರು, ಪೋಲಿಂಗ್ ಅಧಿಕಾರಿಗಳಿಗೆ ಊಟದ ವ್ಯವಸ್ಥೆಯನ್ನು ಅತ್ಯಂತ ಕಾಳಜಿ ವಹಿಸಿ ಮಾಡಬೇಕು.
ಪ್ರತಿ ಬೂತ್‍ಗಳಿಗೆ ಒಬ್ಬ ಸಹಾಯಕರನ್ನು ಈಗಲೇ ನೇಮಿಸಬೇಕು. ಹಾಗೂ ಕ್ಲಸ್ಟರ್ ಬೂತ್ ಮತ್ತು ರಿಮೋಟ್ ಮತಗಟ್ಟಗಳಿಗೆ ಭೇಟಿ ನೀಡಿ ಎಲ್ಲ ರೀತಿಯ ಅಗತ್ಯ ವ್ಯವಸ್ಥೆ ಮಾಡಬೇಕು.
ಕನಿಷ್ಟ ಸೌಲಭ್ಯಗಳನ್ನು ಖಾತ್ರಿಪಡಿಸಲು ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಬೇಕು. ಮತದಾನ ದಿನದಂದು ತಮ್ಮ ತಮ್ಮ ಗ್ರಾ.ಪಂ ವ್ಯಾಪ್ತಿಯಲ್ಲಿ ಅಗತ್ಯವಾದ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕೆಂದು ಸೂಚನೆ ನೀಡಿದ ಅವರು ಇಓಗಳು ತಹಶೀಲ್ದಾರರೊಂದಿಗೆ ಸಮನ್ವಯ ಸಾಧಿಸಿ ಮತದಾನ ದಿನದ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಿಇಓ ಮಾತನಾಡಿ, ಇಓ ಗಳು ಪ್ರತಿ ಬೂತ್‍ಗಳಿಗೆ ಗ್ರಾ.ಪಂ ಯಿಂದ ಓರ್ವ ಸಿಬ್ಬಂದಿಯನ್ನು ಸಹಾಯಕರಾಗಿ ನೇಮಿಸಬೇಕು. ಮತದಾರರಿಗೆ ಅನುಕೂಲವಾಗುವಂತೆ ಶಾಮಿಯಾನ, ನೀರಿನ ವ್ಯವಸ್ಥೆ, ನಿರೀಕ್ಷಣಾ ಕೊಠಡಿ, ಫ್ಯಾನ್ ಮತ್ತು ಚೇರ್‍ಗಳ ವ್ಯವಸ್ಥೆ ಮಾಡಬೇಕು.
ಹಾಗೂ ಮತದಾನ ದಿನದಂದು ಮತಗಟ್ಟೆಗಳ 500 ಮೀಟರ್ ವ್ಯಾಪ್ತಿಯಲ್ಲಿ ಸ್ವಚ್ಚತೆ ಕಾಪಾಡಬೇಕು. ಪಿಡಿಓ ಗಳು ಹಿಂದಿನ ದಿನವೇ ಸ್ವಚ್ಚತೆಯ ಕ್ರಮ ಕೈಗೊಂಡು ಈ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಮತದಾನ ಪ್ರಮಾಣ ಹೆಚ್ಚಿಸಲು ರಾಜ್ಯಾದ್ಯಂತ ಸ್ವೀಪ್ ಚಟುವಟಿಕೆಗಳು ನಡೆಯುತ್ತಿದ್ದು ಮೇ 7 ರಂದು ಎಲ್ಲ ತಾಲ್ಲೂಕುಗಳ ಮುಖ್ಯ ಸರ್ಕಲ್‍ಗಳಲ್ಲಿ ಮತದಾನ ಜಾಗೃತಿ ಕುರಿತು ಮಾನವ ಸರಪಳಿ ನಿರ್ಮಿಸಬೇಕು.
ವಿಜಯ ಪ್ರಕಾಶ್ ಹಾಡಿರುವ ಹಾಗೂ ಡಾ.ಪುನೀತ್ ರಾಜ್ ಕುಮಾರ್‍ರವರ ಮತದಾನ ಕುರಿತಾದ ವಿಡಿಯೋ ಪ್ರದರ್ಶನ ಮಾಡಿ ತಮಗೆ ವರದಿ ಸಲ್ಲಿಸಬೇಕು. ಹಾಗೂ ಸಖಿ, ಯುವ, ಎತ್ನಿಕ್ ಸೇರಿದಂತೆ ಇತರೆ ಮಾದರಿ ಮತಗಟ್ಟೆಗಳ ಸ್ಥಾಪನೆ ಕುರಿತು ಜನರಿಗೆ ತಿಳಿಸಬೇಕು.
ಮತದಾನದ ಆಹ್ವಾನ ಪತ್ರಿಕೆಯನ್ನು ಪ್ರತಿ ತಾಲ್ಲೂಕಿಗೆ ನೀಡಲಾಗುವುದು. ವಿಶೇಷವಾಗಿ ಅಂಗವಿಕಲ, 80 ವರ್ಷ ಮೀರಿದ, ಮಹಿಳೆ ಮತದಾರರು ಮತ್ತು ಕಡಿಮೆ ಮತದಾನ ಆದ ಕಡೆ ಈ ಆಹ್ವಾನ ಪತ್ರಗಳನ್ನು ಹಂಚಿ ಮತದಾನಕ್ಕೆ ಆಹ್ವಾನ ನೀಡಬೇಕು. ಒಟ್ಟಾರೆ ಮತದಾರರ ಅನುಭವವನ್ನು ಉತ್ತಮಗೊಳಿಸಲು ಒತ್ತು ನೀಡಬೇಕು, ಜೊತೆಗೆ ಪೊಲೀಂಗ್ ಅಧಿಕಾರಿ, ಪೊಲೀಸ್ ಸಿಬ್ಬಂದಿಗಳನ್ನು ಅತಿಥಿಗಳ ರೀತಿ ನೋಡಿಕೊಳ್ಳಬೇಕು. ಹಾಗೂ ಮತದಾರರ ಬಗ್ಗೆ ಕಾಳಜಿ ವಹಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್, ಸ್ವೀಪ್ ಜಿಲ್ಲಾ ನೋಡಲ್ ಅಧಿಕಾರಿ ಶ್ರೀಕಾಂತ್, ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು ಪಾಲ್ಗೊಂಡಿದ್ದರು.
SSLC ಫಲಿತಾಂಶ ಪ್ರಕಟ ಯಾವಾಗ? ಇಲ್ಲಿದೆ ವಿವರ
#sslc result / ರಾಜ್ಯ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವಿಳಂಭವಾಗುತ್ತಿದೆ. ನಿರೀಕ್ಷೆಯಂತೆ ಮೇ ಮೊದಲ ವಾರವೇ ರಿಸಲ್ಟ್ ಹೊರಬಿಳಬೇಕಿತ್ತು. ಆದರೆ ಇದೀಗ ಚುನಾವಣೆಯ ನಂತರ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಮೇ.10 ರ ನಂತರ ಎಸ್ಎಸ್ಎಲ್’ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಮೌಲ್ಯಮಾಪನ ಪೂರ್ಣಗೊಂಡಿದ್ದು, ತದನಂತರದ ಕಾರ್ಯ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ)ಯ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.
ಚುನಾವಣೆಗಾಗಿ ಶಾಲೆಗಳನ್ನು ಮತಗಟ್ಟೆಗಳಾಗಿ ಗುರುತಿಸಲಾಗಿದೆ. ಅಲ್ಲದೆ ಹಲವು ಸಿಬ್ಬಂದಿಗಳನ್ನ ಬಳಸಿಕೊಳ್ಳಲಾಗಿದೆ. ಈ ಪ್ರಕ್ರಿಯೆ ಮುಗಿವರೆಗೂ ಫಲಿತಾಂಶ ಪ್ರಕಟ ಕಷ್ಟಸಾಧ್ಯ ಹೀಗಾಗಿ ಫಲಿತಾಂಶ ಮತದಾನ ಪೂರ್ಣಗೊಂಡ ಬಳಿಕ ಮೇ.11 ಅಥವಾ 12 ರಂದು ಹೊರ ಬೀಳುವ ಸಾಧ್ಯತೆ ಇದೆ.
ಶಿವಮೊಗ್ಗ ಜಿಲ್ಲೆಯಲ್ಲಿ 24 ಗಂಟೆ ಕಾಲ ನಿಷೆದಾಜ್ಞೆ ! ಯಾವ ದಿನ? ಏತಕ್ಕಾಗಿ? ವಿವರ ಇಲ್ಲಿದೆ
ಶಿವಮೊಗ್ಗ Karnataka Election/ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ 24 ಗಂಟೆಗಳ ಕಾಲ ನಿಷೇದಾಜ್ಞೆಯನ್ನು ಜಾರಿಮಾಡಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದ್ದು ಅದರ ವಿವರ ಹೀಗಿದೆ
ಮೇ 13 ಮತ್ತು 14 ರಂದು ನಿಷೇದಾಜ್ಞೆ ಜಾರಿ
ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2023 ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆಯು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಮೇ-13 ರ ಬೆಳಗ್ಗೆ 6 ರಿಂದ ಮೇ-14 ರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಯಾವುದಕ್ಕೆ ನಿರ್ಬಂಧ
ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ,ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದವರು ತಿಳಿಸಿದ್ದಾರೆ.
ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.
ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ.
ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾ.ದಂ.ಸಂ.ಕಲಂ 188ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ನಿಷೇಧಾಜ್ಞೆಯು ಸುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸುವುದಿಲ್ಲ.
Read/ Bhadravati/ ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್
Read/ Kichcha Sudeepa/ ನಟ ಸುದೀಪ್ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
Malenadutoday.com Social media
