SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 20, 2024
ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ
ದಕ್ಷಿಣ & ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಅಂತಾ ತಿಳಿಸಿದೆ
#ಮುಂಗಾರುಮಳೆ #KSNDMC
ದಿನ 1 (20 ನೇ ಸೆಪ್ಟೆಂಬರ್ 2004): ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ.
ದಿನ 2 (21 ನೇ ಸೆಪ್ಟೆಂಬರ್ 2024): ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ.


ದಿನ 3(22 ನೇ ಸೆಪ್ಟೆಂಬರ್ 2024): ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಬಾಗಲಕೋಟೆ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ.
ದಿನ 4 (23 ನೇ ಸೆಪ್ಟೆಂಬರ್ 2004): ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಜಿಲ್ಲೆಗಳ ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ.
ದಿನ 5 (24 ನೇ ಸೆಪ್ಟೆಂಬರ್ 2024): ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಜಿಲ್ಲೆಗಳ ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಹೇಳಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ