SHIVAMOGGA | MALENADUTODAY NEWS | Aug 16, 2024 ಮಲೆನಾಡು ಟುಡೆ
ಶಿವಮೊಗ್ಗವೂ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇವತ್ತು ಮತ್ತು ನಾಳೆ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನ ನೀಡಲಾಗಿದೆ. ಇವತ್ತು ಅಂದರೆ ಶುಕ್ರವಾರ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಇನ್ನೂ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಇನ್ನೂ ನಾಳೆ ಅಂದರೆ ಶನಿವಾರ ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.