rain report karnataka / ಇವತ್ತು ಸಹ 6 ಜಿಲ್ಲೆಗಳಿಗೆ ರೆಡ್​ ಅಲರ್ಟ್​ /5 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್!

Malenadu Today

rain report karnataka / ಶಿವಮೊಗ್ಗವೂ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರಿದಿದೆ. ಇವತ್ತಿನ ಹವಾಮಾನ ವರದಿಯನ್ನು ಗಮನಿಸುವುದಾದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಇವತ್ತು ರೆಡ್​ ಅಲರ್ಟ್ ನೀಡಲಾಗಿದೆ. ಇನ್ನೊಂದೆಡೆ ಉತ್ತರ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. 

rain report karnataka

ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ, , ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ರೆಡ್​ ಅಲರ್ಟ್ ನೀಡಿದೆ. ಈ ಪ್ರದೇಶಗಳಲ್ಲಿ ಅತಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಧಾರವಾಡ ಹಾವೇರಿ, ಬೀದರ್​ ಗುಲ್ಬರ್ಗಾ, ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ಈ ದಿನ ರಾಜ್ಯದಾದ್ಯಂತ ಗುಡುಗು ಮಿಂಚು & ಜೋರಾದ ಗಾಳಿಯೊಂದಿಗೆ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

rain report karnataka

Share This Article