RAIN NEWS LIVE

ಶಿವಮೊಗ್ಗದಲ್ಲಿ ಮುಂದಿನ 5 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹವಾಮಾನ ಇಲಾಖೆಯು 26-05-2026 ರಂದು ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

5 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ!

ಮೇ 27 ಮತ್ತು 29 ರಂದು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರವಾದ ಮಳೆಯಾಗುವ ಮುನ್ಸೂಚನೆ ಇದ್ದರೆ, ಮೇ 28 ಹಾಗೂ 30 ರಂದು ಸಾಧಾರಣ ಮಳೆಯ ಮನ್ಸೂಚನೆ ಸಿಕ್ಕಿದೆ.

ಇನ್ನೂ ಮುಂಗಾರು ಮಾರುತಗಳು ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಇನ್ನಷ್ಟು ಭಾಗಗಳಿಗೆ ಪ್ರವೇಶಿಸಲು ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತೊಂದೆಡೆ ಮಳೆ ಗಾಳಿಯಿಂದಾಗಿ ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮರಗಳ ಕೊಂಬೆಗಳು ಮುರಿದು ಬೀಳುವ, ದುರ್ಬಲ ಕಟ್ಟಡಗಳಿಗೆ ಹಾನಿಯಾಗುವ ಹಾಗೂ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಜಾರುವ ರಸ್ತೆಗಳು ಮತ್ತು ಕಡಿಮೆ ಗೋಚರತೆಯಿಂದಾಗಿ ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಗಿ ಪ್ರಯಾಣದ ಸಮಯ ಹೆಚ್ಚಾಗಬಹುದು ಎಂದು ಇಲಾಖೆ ಎಚ್ಚರಿಸಿದೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ನೀಡಿದೆ. ಬಿರುಗಾಳಿ ಸಹಿತ ಮಳೆಯಾಗುವಾಗ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಮತ್ತು ಜಲಮೂಲಗಳ ಬಳಿ ಹೋಗಬಾರದು ಎಂದು ತಿಳಸಿಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ