ರಾಮೇಶ್ವರಂ ಕಫೆ ಸ್ಫೋಟ ಪ್ರಕರಣ | ತೀರ್ಥಹಳ್ಳಿಯಲ್ಲಿ ಎನ್‌ಐಎ ಅಧಿಕಾರಿಗಳ ರೇಡ್‌ !

Rameswaram café blast case | NIA officials raid Thirthahalli

ರಾಮೇಶ್ವರಂ ಕಫೆ ಸ್ಫೋಟ ಪ್ರಕರಣ | ತೀರ್ಥಹಳ್ಳಿಯಲ್ಲಿ ಎನ್‌ಐಎ ಅಧಿಕಾರಿಗಳ ರೇಡ್‌ !
Rameswaram cafe blast case

Shivamogga  Mar 26, 2024   Rameswaram  cafe blast case  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ 

ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಬೆಂಗಳೂರಿನಿಂದ ಬಂದಿರುವ ಅಧಿಕಾರಿಗಳು ತೀರ್ಥಹಳ್ಳಿ ಪೊಲೀಸ್‌ ಮೂಲಗಳನ್ನು ಬಳಸಿಕೊಂಡು ಈ ದಾಳಿ ನಡೆಸಿದ್ದಾರೆ. ಅಲ್ಲದೆ ರಾಮೇಶ್ವರಂ ಕಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸ್ತಿದ್ದಾರೆ