Ranga Sankranti Drama Festival 2026 ಶಿವಮೊಗ್ಗ | ರಂಗಾಸಕ್ತರಿಗಾಗಿ ರಂಗಾಯಣ ಶಿವಮೊಗ್ಗ ರಂಗಬೆಳಕು ಮತ್ತು ಕಡೆಕೊಪ್ಪಲ ಪ್ರತಿಷ್ಠಾನದ ಸಹಯೋಗದೊಂದಿಗೆ ಜನವರಿ 14 ರಿಂದ ಜನವರಿ 19 ರವರೆಗೆ ಆರು ದಿನಗಳ ಕಾಲ ರಂಗ ಸಂಕ್ರಾಂತಿ ನಾಟಕೋತ್ಸವ – 2026 ಆಯೋಜಿಸಿದೆ. ನಗರದ ಅಶೋಕ ನಗರದಲ್ಲಿರುವ ಸುವರ್ಣ ಸಂಸ್ಕೃತಿ ಭವನದಲ್ಲಿ ಈ ಎಲ್ಲಾ ನಾಟಕ ಪ್ರದರ್ಶನಗಳು ನಡೆಯಲಿವೆ. ಪ್ರತಿ ದಿನ ಸಂಜೆ 6.30 ಕ್ಕೆ ನಾಟಕಗಳು ಆರಂಭವಾಗಲಿದ್ದು, ರಂಗಭೂಮಿ ಅಭಿಮಾನಿಗಳಿಗಾಗಿ ವೈವಿಧ್ಯಮಯ ನಾಟಕಗಳನ್ನು ಪ್ರದರ್ಶಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

- ಜನವರಿ 14 ರಂದು ಹುಲಗಪ್ಪ ಕಟ್ಟಿಮನಿ ಅವರ ನಿರ್ದೇಶನದ ‘ಕಾಲಚಕ್ರ’ ನಾಟಕ ಪ್ರದರ್ಶನಗೊಳ್ಳಲಿದೆ.
- ಜನವರಿ 15 ರಂದು ಶಕೀಲ್ ಅಹ್ಮದ್ ನಿರ್ದೇಶಿಸಿರುವ ‘ಕೊಡಲ್ಲ ಅಂದ್ರೆ ಕೊಡಲ್ಲ’
- ಜನವರಿ 16 ರಂದು ಪ್ರಕಾಶ ಗರುಡ ಅವರ ಸಾರಥ್ಯದ ‘ಕಂದಗಲ್ಲ ಭಾರತ’ ನಾಟಕಗಳು ಪ್ರದರ್ಶನಗೊಳ್ಳಲಿದೆ.
- ಜನವರಿ 17 ರಂದು ಜಿ. ಪರಶುರಾಮ್ ಸೂರನಕದ್ದೆ ನಿರ್ದೇಶನದ ‘ಅತ್ತೆಗೊಂದು ಕಾಲ ಸೊಸೆಗೊಂದು ಕಾಲ’
- ಜನವರಿ 18 ರಂದು ‘ಮಹಾತ್ಮರ ಬರುವಿಗಾಗಿ’ ನಾಟಕಗಳು ಪ್ರದರ್ಶನ ಕಾಣಲಿವೆ.
- ಜನವರಿ 19 ರಂದು ಬಿ.ಆರ್. ವೆಂಕಟರಮಣ ಐತಾಳ ಅವರ ನಿರ್ದೇಶನದ ‘ಗುಲಾಮನ ಸ್ವಾತಂತ್ರ್ಯ ಯಾತ್ರೆ’ ನಾಟಕ ಪ್ರದರ್ಶನಗೊಳ್ಳಲಿದೆ.

ನಾಟಕೋತ್ಸವದ ಪ್ರವೇಶ ದರ ಪ್ರತಿ ನಾಟಕಕ್ಕೆ 30 ರೂಪಾಯಿಗಳಂತೆ ನಿಗದಿಪಡಿಸಲಾಗಿದೆ. ನಗರದ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ನಾಟಕಗಳನ್ನು ವೀಕ್ಷಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿಕೊಂಡಿದ್ದಾರೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
