MALENADUTODAY.COM | SHIVAMOGGA NEWS
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನನಲ್ಲಿ ಅಕ್ರಮವಾಗಿ ಪ್ಲಾಪ್ಶೆಲ್ ಆಮೆಯನ್ನು ( rare turtle) ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿದೆ. ಇಲ್ಲಿನ ರಿಪ್ಪನ್ಪೇಟೆ ಸಮೀಪ ಅರಣ್ಯ ಸಂಚಾರಿ ದಳದ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಆತನ ವಿರುದ್ಧ ಕೇಸ್ ದಾಖಲಿಸಿದ್ಧಾರೆ.
ಪ್ಲಾಪ್ಶೆಲ್ ಆಮೆ (Lissemys punctata) ಮಾರಾಟ ಮಾಡಲು ವ್ಯಕ್ತಿಯೊಬ್ಬ ಮುಂದಾಗಿದ್ದ. ಈತ ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಈ ಆಮೆಯನ್ನು ಮಾರುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ವಿಷಯ ತಿಳಿದು ದಾಳಿ ನಡೆಸಿ ಆಮೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಕೇಸ್ ದಾಖಲಿಸಿದೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com