ರೇಷನ್​ ಅಂಗಡಿಯಲ್ಲಿ ಅಕ್ಕಿ ಕೊಡಲು ಹೊಸ ಆದೇಶ! ಬದಲಾಯ್ತು ಸಮಯ!

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ration shop / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯದಲ್ಲಿ ಜುಲೈ 2026 ರ ಮಾಹೆಯ ಅನ್ನಭಾಗ್ಯ ಹಾಗೂ ಎನ್‌ಎಫ್‌ಎಸ್‌ಎ ಅಕ್ಕಿ ವಿತರಣೆಯನ್ನ ತ್ವರಿತವಾಗಿ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ಪ್ರತಿದಿನ ಕಡ್ಡಾಯವಾಗಿ ಬೆಳಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ತೆರೆದಿಟ್ಟು ಪಡಿತರ ವಿತರಣೆ ಮಾಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಇಲಾಖೆಯ ಆಯುಕ್ತರು 20-07-2026 ರಂದು ರಾಜ್ಯದ ಎಲ್ಲಾ ಜಂಟಿ ಹಾಗೂ ಉಪ ನಿರ್ದೇಶಕರಿಗೆ ಅಧಿಕೃತ ಸುತ್ತೋಲೆ ರವಾನಿಸಿದ್ದಾರೆ. ಭಾರತ ಆಹಾರ ನಿಗಮದಿಂದ ಜುಲೈ ಮಾಹೆಯ ಹಂಚಿಕೆ ಆದೇಶ ಈಗಾಗಲೇ ಸ್ವೀಕೃತವಾಗಿದ್ದು, ಎತ್ತುವಳಿ ಮತ್ತು ವಿತರಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಯವರು ಪಡಿತರ ವಿತರಣೆ ತಡಮಾಡುತ್ತದ್ದಾರೆ ಎಂಬ ಮಾಹಿತಿ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಸೂಚನೆ ಹೊರಡಿಸಲಾಗಿದೆ. ಅಂಗಡಿಯವರು ತಮ್ಮ ದಾಸ್ತಾನು ಲಭ್ಯವಾದ ಕೂಡಲೇ ವಿತರಣೆ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಎನ್‌ಎಫ್‌ಎಸ್‌ಎ ಆಹಾರಧಾನ್ಯ ಮತ್ತು ಅನ್ನಭಾಗ್ಯ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಿಸಬೇಕಾಗಿದ್ದು, ದಾಸ್ತಾನು ಲಭ್ಯವಾಗುತ್ತಿದ್ದಂತೆಯೇ ವಿತರಣೆ ಕಾರ್ಯ ಶುರುವಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದಕ್ಕಾಗಿ ಬೆಳಗ್ಗೆ 6:00 ರಿಂದ ರಾತ್ರಿ 10:00 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿ ತೆರೆದಿಡಬೇಕು, ಅಲ್ಲದೆ ಈ ಬಗ್ಗೆ ಖಚಿತಪಡಿಸಿಕೊಳ್ಳಿ ಎಂದು ಜಂಟಿ ಮತ್ತು ಉಪ ನಿರ್ದೇಶಕರಿಗೆ ಜವಾಬ್ದಾರಿ ವಹಿಸಲಾಗಿದೆ. ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಸೂಚಿಸಲಾಗಿದೆ.

ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸದ ಹೋದಲ್ಲಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ವಿತರಕರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳುವಂತೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor