ಆರ್‌ಬಿಐ ನೇಮಕಾತಿ 2026: 572 ಆಫೀಸ್ ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು | ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಒಟ್ಟು 572 ಆಫೀಸ್ ಆಟೆಂಡೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು ಶಾಖೆಯಲ್ಲಿ 16 ಹುದ್ದೆಗಳು ಲಭ್ಯವಿವೆ. ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. 

ಅರ್ಹತೆ ಮತ್ತು ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ರಾಜ್ಯದ ನಿವಾಸಿಯಾಗಿರುವುದು ಕಡ್ಡಾಯ. ವಯೋಮಿತಿ 18 ರಿಂದ 25 ವರ್ಷಗಳ ನಡುವೆ ಇರಬೇಕು (02-01-2001 ರಿಂದ 01-01-2008 ರ ನಡುವೆ ಜನಿಸಿರಬೇಕು). ಮೀಸಲಾತಿ ನಿಯಮದಂತೆ ವಯೋಮಿತಿ ಸಡಿಲಿಕೆ ಇರಲಿದೆ.

ಆಯ್ಕೆ ವಿಧಾನ ಮತ್ತು ಪರೀಕ್ಷೆRBI Recruitment

ಅಭ್ಯರ್ಥಿಗಳನ್ನು 120 ಅಂಕಗಳ ಆನ್‌ಲೈನ್ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯು 2026ರ ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಎರಡನೇ ಹಂತದಲ್ಲಿ ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT) ನಡೆಸಲಾಗುವುದು. ಬೆಂಗಳೂರು ಕಚೇರಿಗೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿದೆ.

RBI Recruitment ಅರ್ಜಿ ಶುಲ್ಕ ಮತ್ತು ಕೊನೆಯ ದಿನಾಂಕ

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 450 ರೂ. (ಪ್ಲಸ್ 18% ಜಿಎಸ್‌ಟಿ) ಹಾಗೂ ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆಸಕ್ತರು ಫೆಬ್ರವರಿ 4, 2026ರ ಒಳಗಾಗಿ ಆರ್‌ಬಿಐ ಅಧಿಕೃತ ವೆಬ್‌ಸೈಟ್ rbi.org.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

RBI Recruitment Apply for Office Attendant Posts
RBI Recruitment Apply for Office Attendant Posts

RBI Recruitment Apply for Office Attendant Posts

shivamogga car decor sun control house
shivamogga car decor sun control house