rcb stampede tragedy bangalore / ದೇವರೇ! , ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನೂಕುನುಗ್ಗಲು, ಕಾಲ್ತುಳಿತ, RCB ಅಭಿಮಾನಿಗಳ ಸಾವು!

Malenadu Today

rcb stampede tragedy bangalore ಬೆಂಗಳೂರಿನಲ್ಲಿ ನಡೆಯುತ್ತಿರುವ ಆರ್​ಸಿಬಿ ಗೆಲುವಿನ ಮೆರವಣಿಗೆಯು ವಿಷಾಧದ ಘಟನೆಗೆ ಕಾರಣವಾಗಿದೆ. ಆರ್​ಸಿಬಿಯ ಟೀಂನ್ನ ನೋಡಲು ಜನಸಾಗರವೇ ಹರಿದು ಬಂದಿದ್ದು, ಈ ವೇಳೆ ಸಂಭವಿಸಿದ ನೂಕುನುಗ್ಗಲಿನಲ್ಲಿ ಮೂವರು ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

rcb stampede tragedy bangalore
rcb stampede tragedy bangalore

ಅಲ್ಲದೆ ಘಟನೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಇಂದು ಸಂಜೆ 5:30 ಕ್ಕೆ ಲಭ್ಯವಾದ ವರದಿಯಾದ ಪ್ರಕಾರ, 18ನೇ ಆವೃತ್ತಿಯ ಐಪಿಎಲ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ದುರಂತ ಸಂಭವಿಸಿದೆ.

rcb stampede tragedy bangalore
rcb stampede tragedy bangalore

ಗೇಟ್-6 ರಲ್ಲಿ ಅಭಿಮಾನಿಗಳ ನಡುವೆ ನೂಕು ನುಗ್ಗಲು ಉಂಟಾಗಿ, ಒಬ್ಬರ ಮೇಲೋಬ್ಬರು ಬಿದ್ದಿದ್ದಾರೆ. ಬಳಿಕ ಕಾಲ್ತುಳಿತ ಉಂಟಾಗಿ 3 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ. ಅವರಲ್ಲಿ 15ಕ್ಕೂ ಹೆಚ್ಚು ಜನರು ಕಾಲ್ತುಳಿತದಿಂದ ಅಸ್ವಸ್ಥಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಓರ್ವ ಮಹಿಳೆ ಕೂಡ ಇದ್ದರು ಎನ್ನಲಾಗುತ್ತಿದೆ.

rcb stampede tragedy bangalore
rcb stampede tragedy bangalore

 

 

 

 

Share This Article