rcb stampede tragedy bangalore ಬೆಂಗಳೂರಿನಲ್ಲಿ ನಡೆಯುತ್ತಿರುವ ಆರ್‌ಸಿಬಿ ಗೆಲುವಿನ ಮೆರವಣಿಗೆಯು ವಿಷಾಧದ ಘಟನೆಗೆ ಕಾರಣವಾಗಿದೆ. ಆರ್ಸಿಬಿಯ ಟೀಂನ್ನ ನೋಡಲು ಜನಸಾಗರವೇ ಹರಿದು ಬಂದಿದ್ದು, ಈ ವೇಳೆ ಸಂಭವಿಸಿದ ನೂಕುನುಗ್ಗಲಿನಲ್ಲಿ ಮೂವರು ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಅಲ್ಲದೆ ಘಟನೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಇಂದು ಸಂಜೆ 5:30 ಕ್ಕೆ ಲಭ್ಯವಾದ ವರದಿಯಾದ ಪ್ರಕಾರ, 18ನೇ ಆವೃತ್ತಿಯ ಐಪಿಎಲ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ದುರಂತ ಸಂಭವಿಸಿದೆ.

ಗೇಟ್-6 ರಲ್ಲಿ ಅಭಿಮಾನಿಗಳ ನಡುವೆ ನೂಕು ನುಗ್ಗಲು ಉಂಟಾಗಿ, ಒಬ್ಬರ ಮೇಲೋಬ್ಬರು ಬಿದ್ದಿದ್ದಾರೆ. ಬಳಿಕ ಕಾಲ್ತುಳಿತ ಉಂಟಾಗಿ 3 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ. ಅವರಲ್ಲಿ 15ಕ್ಕೂ ಹೆಚ್ಚು ಜನರು ಕಾಲ್ತುಳಿತದಿಂದ ಅಸ್ವಸ್ಥಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಓರ್ವ ಮಹಿಳೆ ಕೂಡ ಇದ್ದರು ಎನ್ನಲಾಗುತ್ತಿದೆ.


बेंगलुरू में बड़ा हादसा। स्टेडियम में भगदड़। कई की मौत। अनेक घायल। आरसीबी की विक्ट्री परेड होनी थी चिन्ना स्वामी स्टेडियम में। दो लाख के बजाय छह लाख पहुंच गए थे लोग। टीम की एक झलक पाने के लिए बेताब थे लोग।#RCBvPBKS #BreakingNews #RCB #Bangalore #IPL2025 #Stampede #BreakingNews… pic.twitter.com/eTLmtjSFkz
— SANJAY TRIPATHI (@sanjayjourno) June 4, 2025
Tragic news coming from Chinnaswamy Stadium.
Two persons including a child have reportedly died during stampede during the RCB victory celebrations.
More than 25 injured, six critical.
Requesting everyone to stay away from Chinnaswamy stadium for now. 🙏 pic.twitter.com/Gh5b9TYr9K
— Incognito (@Incognito_qfs) June 4, 2025