Recruitment for Anganwadi Workers ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (WCD) ಶಿವಮೊಗ್ಗ ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 109 ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.
ಶಿವಮೊಗ್ಗದಲ್ಲಿ ಪ್ರೀಯಾಗಿ ಬಿಪಿ, ಶುಗರ್ ಚೆಕ್ ಮಾಡಿಸಬೇಕೆ!? ಈ ಮಾಹಿತಿ ಜೊತೆ ಇನ್ನಷ್ಟು ವಿಚಾರ ಇಲ್ಲಿದೆ
ಶಿವಮೊಗ್ಗ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಒಟ್ಟು 16 ಅಂಗನವಾಡಿ ಕಾರ್ಯಕರ್ತೆಯರ ಮತ್ತು 93 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಸ್ಥಳೀಯ ನಿವಾಸಿಗಳಿಗೆ ಇದು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಕ್ಕಳ ಪಾಲನೆ ಹಾಗೂ ಪೂರ್ವ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಉತ್ತಮ ಅವಕಾಶವಾಗಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಆದ https://karnemakaone.kar.nic.in/abcd/ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ. ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಶಿವಮೊಗ್ಗ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚುವರಿ ಮಾಹಿತಿ ಅಥವಾ ಸ್ಪಷ್ಟೀಕರಣಗಳಿಗಾಗಿ ಅಭ್ಯರ್ಥಿಗಳು ಮೇಲೆ ತಿಳಿಸಲಾದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು, ಅಥವಾ ನೇರವಾಗಿ ಶಿವಮೊಗ್ಗ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
Recruitment for Anganwadi Workers

