Red Alert in Coastal Malnad ಶಿವಮೊಗ್ಗ, malenadu today news : August 18 2025 : ಹವಾಮಾನ ಇಲಾಖೆ ಬೆಂಗಳೂರು ಇದರ ಪ್ರಕಾರಣ ಶಿವಮೊಗ್ಗವೂ ಸೇರಿದಂತೆ ಮಲೆನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಇವತ್ತು ಭಾರೀ ಮಳೆಯಾಗಲಿದೆ.ಅದರ ಬಗ್ಗೆ ವಿವರಿಸುವುದಕ್ಕೂ ಮೊದಲು ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..
ಈ ಹಿನ್ನೆಲೆಯಲ್ಲಿ ಶಿವಮೊಗ್ಗವೂ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುಖ್ಯವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇವತ್ತು ಈ ಜಿಲ್ಲೆಗಳಲ್ಲಿ 2000 ಮಿ.ಮೀ.ಗಿಂತಲೂ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೂ ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ನೀಡಲಾಗಿದೆ.

ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ
ನಿನ್ನೆಯೇ ಶಿವಮೊಗ್ಗದಲ್ಲಿ ಭಾರಿ ಮಳೆಯಾಗಿದ್ದು, ಇವತ್ತು ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ರಾಜ್ಯ ಮಾಧ್ಯಮವೊಂದರ ಪ್ರಕಾರ, ನಿನ್ನೆ ದಿನ ಹಾಸನ ಜಿಲ್ಲೆಯ ಶಿರಡಿಯಲ್ಲಿ ಕೇವಲ ಎರಡು ಗಂಟೆಗಳಲ್ಲಿ 40 ಸೆಂ.ಮೀ. ಮಳೆ ದಾಖಲಾಗಿದೆ.

ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಶೃಂಗೇರಿಯಿಂದಲೇ ನದಿಯು ಉಕ್ಕಿ ಹರಿಯುತ್ತಿದ್ದು, ತುಂಗಾ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ ಬರುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು (ಆರು ತಾಲೂಕು), ಉತ್ತರ ಕನ್ನಡ (10 ತಾಲೂಕು), ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Red Alert in Coastal Malnad
ಕರ್ನಾಟಕ ಮಳೆ, ರೆಡ್ ಅಲರ್ಟ್, ಹವಾಮಾನ ಮುನ್ಸೂಚನೆ, Coastal Karnataka, Malnad rains, Karnataka weather, ಕರ್ನಾಟಕ ಹವಾಮಾನ ಇಲಾಖೆ, Online rain report, Malnad weather, school holiday, weather forecast, #Monsoon, #WeatherUpdate #IMD, Red Alert in Coastal Malnad
