red alert news shivamogga / ಜೂನ್​ 17 ರ ವರೆಗೆ ರೆಡ್​ ಅಲರ್ಟ್!

Malenadu Today

red alert news shivamogga  ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಪುನಃ ಸಕ್ರಿಯಗೊಂಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯೊಂದಿಗೆ ಗಾಳಿಯು ಸಹ ರಭಸವಾಗಿ ಬೀಸುತ್ತಿದೆ. ಇನ್ನೂ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 17ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು ಹಲವು ಜಿಲ್ಲೆಗಳಿಗೆ ರಡ್​ ಅಲರ್ಟ್ ನೀಡಿದೆ. 

red alert news shivamogga  ಮಳೆ ಎಚ್ಚರಿಕೆಗಳ ವಿವರಗಳು:

ರೆಡ್ ಅಲರ್ಟ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್ ಅಲರ್ಟ್: ದಾವಣಗೆರೆ, ಹಾಸನ, ಹಾವೇರಿ, ಗದಗ, ಬೆಳಗಾವಿ ಮತ್ತು ಧಾರವಾಡದಂತಹ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಇತ್ತ  ಬೆಂಗಳೂರಿನಲ್ಲಿ ಪ್ರಬಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗರಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ, IMD ಯ ಸಲಹೆಗಳನ್ನು ಗಮನಿಸುವಂತೆ ತಿಳಿಸಿದೆ. 

ಹವಾಮಾನ ಇಲಾಖೆಯ ಡೈಲಿ ಬುಲೆಟಿನ್ ಪ್ರಕಾರ, ಇವತ್ತು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (50-60 ಕಿ.ಮೀ.) ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (50-60 ಕಿ.ಮೀ.) ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (50-60 ಕಿ.ಮೀ.) ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. red alert news shivamogga 

ಬಳ್ಳಾರಿ, ಚಿತ್ರದುರ್ಗ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನೂ ಐಎಂಡಿ ಬೆಂಗಳೂರು ಇದರ ಈ ಕ್ಷಣದ ಮಾಹಿತಿಯ ಪ್ರಕಾರ, ಇವತ್ತು ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ.  ಮಲೆನಾಡು ಜಿಲ್ಲೆಗಳು ಸೇರಿದಂತೆ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಈ ಕ್ಷಣದ ವರದಿಯ ಫೋಟೋ ಇಲ್ಲಿದೆ.  ಆಯಾ ಸಂದರ್ಭದ ವಾತಾವರಣಕ್ಕೆ ತಕ್ಕಂತೆ ಈ ಸೂಚನೆಗಳು ಬದಲಾಗುತ್ತವೆ

 

Share This Article