ರೈತರಿಗೆ ಇಲ್ಲಿದೆ ಗುಡ್​ ನ್ಯೂಸ್ | ಬೆಂಬಲ ಬೆಲೆಯಲ್ಲಿ ಖರೀದಿಗೆ ನೋಂದಣಿ ಆರಂಭ!

Registration for purchase of paddy at minimum support price begins ಕನಿಷ್ಟ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೋಂದಣಿ ಆರಂಭ

ರೈತರಿಗೆ ಇಲ್ಲಿದೆ ಗುಡ್​ ನ್ಯೂಸ್ | ಬೆಂಬಲ ಬೆಲೆಯಲ್ಲಿ ಖರೀದಿಗೆ ನೋಂದಣಿ ಆರಂಭ!

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS

SHIVAMOGGA |  ಭತ್ತಕ್ಕೆ ಬೆಂಬಲ ಬೆಲೆ; ರೈತರ ನೊಂದಣಿ ಪ್ರಕ್ರಿಯೆ ಆರಂಭ2023-24ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿದಲು ರೈತರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ

ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಭತ್ತವನ್ನು ನೀಡಲು ಇಚ್ಛಿಸುವ ರೈತರು ಖರೀದಿ ಕೇಂದ್ರಗಳಲ್ಲಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ತಂತ್ರಾಂಶದ ಗುರುತಿನ ಪತ್ರ, ಆಧಾರ್ ಸಂಖ್ಯೆ ಮತ್ತು ತಮ್ಮ ಬ್ಯಾಂಕ್ ಖಾತೆಯ ಎಲ್ಲಾ ವಿವರಗಳು ಇರುವ ಪಾಸ್ ಪುಸ್ತಕದ ಇತ್ತೀಚಿನ ದೃಢೀಕೃತ ಪ್ರತಿಯೊಂದಿಗೆ ನ.15 ರಿಂದ ಹೆಸರನ್ನು ನೋಂದಣಿ ಮಾಡಿಕೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ. 

READ : ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿ! 50 % ಡಿಸ್ಕೌಂಟ್/ ಅರ್ಜಿ ಆಹ್ವಾನ/ ಕೃಷಿಕರಿಗೆ ಉಪಯೋಗ ಸೇರಿದಂತೆ ಇನ್ನಷ್ಟು INFORMATION

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸೇರಿದಂತೆ ಎಲ್ಲಾ ತಾಲೂಕುಗಳ ಎ.ಪಿ.ಎಂ.ಸಿ ಯಾರ್ಡ್‍ಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ಡಿಸೆಂಬರ್ 01, 2023 ರಿಂದ ಮಾರ್ಚ್ 31, 2024ರವರೆಗೆ ರೈತರಿಂದ ಭತ್ತ ಖರೀದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ  .  

ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಂಡ ಸಂದರ್ಭದಲ್ಲಿ ಅಗತ್ಯವಿದ್ದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು.  ಸಾಮಾನ್ಯ ಭತ್ತಕ್ಕೆ ರೂ. 2183/- ಹಾಗೂ ಗ್ರೇಡ್ ಎ ಭತ್ತಕ್ಕೆ  ರೂ. 2203/- ರಂತೆ ಸರ್ಕಾರವು ಬೆಲೆ ನಿಗದಿಪಡಿಸಿದೆ.  ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.