STATE NEWS

ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರ ಪಾಲು ಕಾನೂನನ್ನು ರದ್ದುಪಡಿಸಿ, ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಆಗ್ರಹ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಸಮಾನ ಪಾಲು ನೀಡುವ ಪ್ರಸ್ತುತ ಕಾನೂನಿನ ಬಗ್ಗೆ ಸಿರಿ ಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆಸ್ತಿ ಹಂಚಿಕೆಯ ವಿಚಾರವಾಗಿ ಕುಟುಂಬಗಳಲ್ಲಿ ಬಿರುಕು ಮೂಡುತ್ತಿದ್ದು, ಈ ಕಾನೂನನ್ನು ಮರುಪರಿಶೀಲಿಸಬೇಕು ಅಥವಾ ರದ್ದುಗೊಳಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

ಶಿವಮೊಗ್ಗ : ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಕುಟುಂಬದ ಹಿನ್ನೆಲೆಯನ್ನು ವಿವರಿಸಿದ ಶ್ರೀಗಳು, ಹೆಣ್ಣುಮಕ್ಕಳ ಮದುವೆಗಾಗಿ ತಂದೆ-ತಾಯಿ ಮತ್ತು ಸಹೋದರರು ಸಾಕಷ್ಟು ಕಷ್ಟಪಡುತ್ತಾರೆ. ಸಾಲಸೋಲ ಮಾಡಿಯೋ ಅಥವಾ ಆಸ್ತಿಯನ್ನು ಮಾರಾಟ ಮಾಡಿಯೋ ಅದ್ಧೂರಿಯಾಗಿ ವಿವಾಹ ನೆರವೇರಿಸಿರುತ್ತಾರೆ. ಇಷ್ಟೆಲ್ಲಾ ಆದ ಮೇಲೂ ಸಹೋದರಿಯರು ಉಳಿದಿರುವ ಆಸ್ತಿಯಲ್ಲಿ ಮತ್ತೆ ಪಾಲು ಕೇಳುವುದು ನೈತಿಕವಾಗಿ ಸರಿಯಲ್ಲ ಎಂದು ಅವರು ಪ್ರತಿಪಾದಿಸಿದರು.

ಆಸ್ತಿ ವಿಚಾರವಾಗಿ ನಡೆಯುತ್ತಿರುವ ಹಗ್ಗಜಗ್ಗಾಟದಿಂದಾಗಿ ರಕ್ತ ಸಂಬಂಧಗಳು ಹಾಳಾಗುತ್ತಿವೆ. ಕುಟುಂಬಗಳು ಒಡೆದು ಹೋಗುತ್ತಿರುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿದೆ. ಹೀಗಾಗಿ, ಜನಪ್ರತಿನಿಧಿಗಳು ಮತ್ತು ಸರ್ಕಾರವು ಈ ಕಾನೂನಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಸಂಬಂಧಗಳನ್ನು ಕೆಡಿಸುವ ಇಂತಹ ನಿಯಮಗಳನ್ನು ಹಿಂಪಡೆಯಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ.

ಕಾನೂನುಗಳು ಯಾವಾಗಲೂ ಜನರ ಹಿತವನ್ನು ಕಾಯುವಂತಿರಬೇಕು ಮತ್ತು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಆದರೆ, ಪ್ರಸ್ತುತ ಇರುವ ಆಸ್ತಿ ಹಂಚಿಕೆ ಕಾನೂನು ಜನಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಆದ್ದರಿಂದ ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ ಕಾನೂನನ್ನು ತೆಗೆದುಹಾಕುವ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದು ಅವರು ಒತ್ತಾಯಿಸಿದರು.

Repeal Womens Property Rights Law Sirigere Sri

Repeal Womens Property Rights Law Sirigere Sri
Repeal Womens Property Rights Law Sirigere Sri

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.