ವಿದ್ಯಾನಗರ, ಕಡದಕಟ್ಟೆ, ಸವಳಂಗ ರಸ್ತೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಗಿಯುತ್ತೆ! | ಸಂಸದ ಬಿ.ವೈ.ರಾಘವೇಂದ್ರರವರು ಹೇಳಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 20, 2023 SHIVAMOGGA NEWS

ಶಿವಮೊಗ್ಗ ನಗರದ ನಾಲ್ಕು ದಿಕ್ಕುಗಳಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಹಾಗೂ ಅಂಡರ್​ ಪಾಸ್ ಕಾಮಗಾರಿಗಳ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರರವರು ಅಪ್​ಡೇಟ್ ನೀಡಿದ್ದಾರೆ. 

ಅಂದಾಜು 140 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪೈಕಿ ಈಗಾಗಲೇ ಸೋಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಗಿದಿದೆ, ಪಿಎನ್​ಟಿ ಕಾಲೋನಿ ಬಳಿ ಅಂಡರ್​ ಪಾಸ್ ಕಾಮಗಾರಿ ಮುಗಿದಿದೆ ಎಂದು ಮಾಹಿತಿ ನೀಡಿದ್ದಾರೆ. 

ಇನ್ನೂ  ಸವಳಂಗ ರಸ್ತೆಯ ಎಲ್‌ಸಿ-49ರಲ್ಲಿ ₹39 ಕೋಟಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿ ಎಂದು ತಿಳಿಸಿದ್ದಾರೆ. 

 .

ಭದ್ರಾವತಿ ತಾಲ್ಲೂಕಿನ ಕಡದಕಟ್ಟೆ ಬಳಿ ಎಲ್.ಸಿ-34 ಮೇಲ್ಸೇತುವೆ ಕಾಮಗಾರಿ ಕೂಡ ಪ್ರಗತಿಯಲ್ಲಿದೆ ಎಂದ ಅವರು,  ವಿದ್ಯಾನಗರದ ರೈಲ್ವೆ ಮೇಲ್ಸೇತುವೆ ಪೂರ್ಣಗೊಳ್ಳುವ ಹಂತದಲ್ಲಿದೆ.

ಡಿಸೆಂಬರ್ ಅಂತ್ಯಕ್ಕೆ ಎಲ್ಲಾ ಕಾಮಗಾರಿ ಮುಗಿದು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಒಟ್ಟಾರೆಯಾಗಿ ಮಾಹಿತಿ ನೀಡಿದರು. ಅಲ್ಲದೆ,  ಕೆಲವು ಕಡೆ ಅಡ್ಡರಸ್ತೆ ಕಾಮಗಾರಿ ಹೆಚ್ಚುವರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂಧು ತಿಳಿಸಿದ್ದಾರೆ.  


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor