ಪ್ರಯಾಣಿಕರಲ್ಲಿ ವಿನಂತಿ! ಯುಗಾದಿ ಹಬ್ಬಕ್ಕೆ ಊರಿಗೆ ತೆರಳಲು 2000 ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ! ಹೆಚ್ಚಿನ ಮಾಹಿತಿ ಇಲ್ಲಿದೆ

Request to passengers! More than 2000 special buses arranged to go home for Ugadi festival ksrtc

ಪ್ರಯಾಣಿಕರಲ್ಲಿ ವಿನಂತಿ! ಯುಗಾದಿ ಹಬ್ಬಕ್ಕೆ ಊರಿಗೆ ತೆರಳಲು 2000 ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ! ಹೆಚ್ಚಿನ ಮಾಹಿತಿ ಇಲ್ಲಿದೆ
Request to passengers, ksrtc

Shivamogga  Apr 5, 2024 Request to passengers, ksrtc  ಇನ್ನೇನು ಯುಗಾದಿ ಬಂದೇ ಬಿಡ್ತು. ಹೊಸವರ್ಷದ ಆಗಮನಕ್ಕೆ ಜನರು ತಮ್ಮ ತಮ್ಮ ಊರುಗಳಿಗೆ ಹೋಗಲು ಸಿದ್ಧರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ಸಮಸ್ಯೆಯಾಗದಿರಲಿ ಅಂತಾ ಕೆಎಸ್‌ಆರ್‌ಟಿಸಿ 2000 ಕ್ಕೂ ವಿಶೆಷ ಬಸ್‌ಗಳನ್ನ ಬಿಡುತ್ತಿದೆ. ಈ ವಿಶೇಷ ಬಸ್‌ ಗಳ ಏಪ್ರಿಲ್‌ ಆರರಿಂದ ಏಪ್ರಿಲ್‌ 8 ರ ತನಕ ಸಂಚಾರ ನಡೆಸಲಿವೆ ಎಂದು ಕೆಎಸ್‌ಆರ್‌ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ವೀಕೆಂಡ್‌ ರಜೆಯ ಹಿನ್ನೆಲೆಯಲ್ಲಿ ಊರುಗಳಿಗೆ ಹಬ್ಬದ ಆಚರಣೆಗೆ ತೆರಳುವವರ ಸಂಖ್ಯೆ ಸಹಜವಾಗಿಯೇ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ  ಮೂರು ದಿನಗಳ ಕಾಲ ವಿಶೇಷ ಬಸ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ.  ಕೆಎಸ್‌ಆರ್‌ಟಿಸಿಯ 1,750, ಎನ್‌ಡಬ್ಲ್ಯುಕೆಆರ್‌ಟಿಸಿಯ 145, ಕೆಕೆಆರ್‌ಟಿಸಿಯ 200 ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳು ಸಂಚರಿಸಲಿದೆ. 

ಎಲ್ಲೆಲ್ಲಿಗೆ ಪ್ರಯಾಣ

ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಇ.ವಿ. ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ಸಂಚಾರ ಇರಲಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಹೊರಡಲಿವೆ. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್‌ಘಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಇರಲಿದೆ ಎಂದು ತಿಳಸಿಲಾಗಿದೆ.