MALENADUTODAY.COM | SHIVAMOGGA | #KANNADANEWSWEB
ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಫೆಬ್ರವರಿ 27 ಕ್ಕೆ ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಮಾರಂಭಕ್ಕೆ, ನಾಗರಿಕರನ್ನು ಕರೆತರಲು ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ 200 ಬಸ್ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಸಾಂದರ್ಭಿಕ ಒಪ್ಪಂದದ ಆಧಾರದ ಮೇಲೆ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ನೂರಾರು ಬಸ್ ಗಳನ್ನು ಬಾಡಿಗೆ ಪಡೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 26 ಹಾಗೂ 27 ರಂದು ಜಿಲ್ಲೆಯಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಸಂಚಾರದಲ್ಲಿ ಅಸ್ತವ್ಯಸ್ತವಾಗಲಿದೆ.
ಈ ಸಂಬಂಧ ಕೆಎಸ್ಆರ್ಟಿಸಿ ಪ್ರಕಟಣೆಯನ್ನು ನೀಡಿದ್ದು, ಇದೇ ಫೆಬ್ರವರಿ 26 ರ ಮಧ್ಯಾಹ್ನದಿಂದ 27 ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸಹಕರಿಸುವಂತೆ’ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #KSRTC #MODIPROGRAM #SHIVAMOGGA AIRPORT
