ಶಿವಮೊಗ್ಗ ನಾಗರಿಕರಲ್ಲಿ ವಿನಂತಿ ! ಎರಡು ದಿನಗಳ ಕಾಲ ನಗರದಲ್ಲಿ ಬರೋದಿಲ್ಲ ನೀರು? ಕಾರಣವೇನು? ಯಾವಾಗ? ಎಲ್ಲೆಲ್ಲಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 10, 2023 SHIVAMOGGA NEWS 

ಶಿವಮೊಗ್ಗ / ನಗರ ನಾಗರಿಕರಿಗೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಲಿದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಪ್ರಕಟಣೆಯಲ್ಲಿ ಏನಿದೆ?

ಶಿವಮೊಗ್ಗ ನಗರದಲ್ಲಿ ಇದೇ ಜೂನ್​  11 ಮತ್ತು 12ರಂದು ಕುಡಿಯುವ ನೀರು (Drinking Water) ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರಣವೇನು?

ಜೂ.11ರಂದು ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್‌ ಸರಬರಾಜು ಮಾಡುವ ವಿತರಣಾ ಕೇಂದ್ರದ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ, ನೀರು ಸರಬರಾಜು  ಕೇಂದ್ರಕ್ಕೆ ವಿದ್ಯುತ್‌ ಪೂರೈಕೆ ಆಗುವುದಿಲ್ಲ. ಆದ್ದರಿಂದ ಜೂನ್​ 11 ಮತ್ತು 12ರಂದು ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಲಿದೆ ಎನ್ನಲಾಗಿದೆ

 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು