ರಿಪ್ಪನ್‌ಪೇಟೆ /ಮಲೆನಾಡು ಟುಡೆ ಸುದ್ದಿ / ಜಾಗದ ವಿಚಾರಕ್ಕೆ ರಿಪ್ಪನ್ಪೇಟೆಯಲ್ಲಿ ಜೋರು ಮಾತಿನ ಪೈಟ್ ನಡೆದು, ಪರಸ್ಪರ ತಳ್ಳಾಡಿದರ ಘಟನೆ ನಡೆದಿದೆ. ಇಲ್ಲಿನ ಬರುವೆ ರಸ್ತೆಯಲ್ಲಿರುವ ಹಳೆಯ ಸಂತೆ ಮಾರ್ಕೆಟ್ ವ್ಯಾಪ್ತಿಗೆ ಸೇರಿರುವ ಪಂಚಾಯಿತಿ ಆಡಳಿತದ ಅಧೀನದ ಜಾಗವನ್ನು ರಾತ್ರೋರಾತ್ರಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ಫೈಟ್ ನಡೆದಿದೆ. ಅಂತಿಮವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಒತ್ತುವರಿ ತೆರವುಗೊಳಿಸಲಾಗಿದೆ.

ಏನಿದು ಪ್ರಕರಣ
ಇಲ್ಲಿನ ಸರ್ವೆ ನಂಬರ್ 43ರಲ್ಲಿ ಬರುವ ನಿವೇಶನವನ್ನು ನಿಯಮಬಾಹಿರವಾಗಿ ಆಕ್ರಮಿಸಿಕೊಳ್ಳಲಾಗಿದೆ. ಅಲ್ಲಿ ಟೆಂಟ್ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ಪಂಚಾಯಿತಿ ಆಡಳಿತ ಮಂಡಳಿ ಮೊನ್ನೆ ಶನಿವಾರದಂದು ಕಾರ್ಯಾಚರಣೆ ನಡೆಸಿ ಒತ್ತುವರಿಯಾದ ಜಾಗವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.
ಆದರೆ ಈ ತೆರವು ಕಾರ್ಯಾಚರಣೆಗೆ ಒತ್ತುವರಿದಾರರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು. 1991ನೇ ಇಸವಿಯಲ್ಲಿಯೇ ಗ್ರಾಮ ಪಂಚಾಯಿತಿಯು ತಮಗೆ ಅಧಿಕೃತವಾಗಿ ಹಕ್ಕುಪತ್ರವನ್ನು ನೀಡಿದ್ದು, ಆ ದಾಖಲೆಗಳು ತಮ್ಮ ಬಳಿ ಸುರಕ್ಷಿತವಾಗಿವೆ ಎಂಬುದು ಅವರ ಸಮರ್ಥನೆಯಾಗಿದೆ. ಇದೆ ಕಾರಣಕ್ಕೆ ಒತ್ತುವರಿದಾರರು ಹಾಗೂ ತೆರವು ಕಾರ್ಯಾಚರಣೆಗೆ ಮುಂದಾದ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಮಾಜಿ ಸದಸ್ಯರ ನಡುವೆ ಮಾತಿನ ಚಕಮಕಿ ಏರ್ಪಟ್ಟು, ಸ್ಥಳದಲ್ಲಿ ಗೌಜು ಗಲಾಟೆಯಾಯ್ತು.
ಇಷ್ಟೆ ಅಲ್ಲದೆ ಇದೇ ವಿಚಾರದಲ್ಲಿ ಪರಸ್ಪರ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಎರಡೂ ಗುಂಪಿನವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದೆ ರಿಪ್ಪನ್ ಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೆಂಟ್ ರಿಜಿಸ್ಟರ್ ಮಾಡಿದ್ದಾರೆ.
ಇನ್ನೂ ಈ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರುಗಳಾದ ನಿರೂಷ್ ಕುಮಾರ್, ಪ್ರಕಾಶ್, ಮಲ್ಲಿಕಾರ್ಜುನ್, ಪಾಲೇಕರ್ ಹಾಗೂ ಸುಂದರೇಶ್ ಅವರುಗಳು ಉಪಸ್ಥಿತರಿದ್ದರು. ಇವರೊಂದಿಗೆ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರಾದ ನಾಗೇಶ್ ಮೋರೆ ಮತ್ತು ರಾಜೇಶ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
Ripponpet Land Encroachment Cleared Two Groups Clash and Hospitalized when did the Gram Panchayat conduct the clearance drive,
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.