ರಿಪ್ಪನ್​ ಪೇಟೆ : 21 ಕೆಜಿ ಜಿಂಕೆ ಮಾಂಸ ವಶಪಡಿಸಿಕೊಂಡ ಅಧಿಕಾರಿಗಳು, ಆರೋಪಗಳು ಸ್ಥಳದಿಂದ ಪರಾರಿ

ಹಂಚಿಕೊಳ್ಳಿ
WhatsApp Facebook X Telegram
Ripponpet Raid 21 kg Deer Meat Seized
Ripponpet Raid 21 kg Deer Meat Seized

ಮಲೆನಾಡುಟುಡೆ ಸುದ್ದಿ / ರಿಪ್ಪನ್‌ಪೇಟೆ: ಪಟ್ಟಣದ ಶಬರೀಶ ನಗರದಲ್ಲಿ ಮಾರಾಟಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. 

ಮಾಹಿತಿಯ ಮೇರೆಗೆ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ನೇತೃತ್ವದ ಅಧಿಕಾರಿಗಳ ತಂಡವು ಶಬರೀಶ ನಗರದ ಆಯಕಟ್ಟಿನ ಸ್ಥಳದ ಮೇಲೆ ದಿಢೀರ್ ದಾಳಿ ನಡೆಸಿತು. ಈ ಕಾರ್ಯಾಚರಣೆಯ ವೇಳೆ ಮಾರುತಿ ಎರ್ಟಿಗಾ ಕಾರಿನಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 21 ಕೆ.ಜಿ. ಜಿಂಕೆ ಮಾಂಸ ಪತ್ತೆಯಾಗಿದ್ದು, ಅಧಿಕಾರಿಗಳು ಮಾಂಸ ಮತ್ತು ವಾಹನ ಎರಡನ್ನೂ ವಶಕ್ಕೆ ಪಡೆದಿದ್ದಾರೆ. 

ದಾಳಿಯ ಸುಳಿವು ಸಿಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಲೆಮರೆಸಿಕೊಂಡಿರುವ ಶಂಕಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯು, ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದೆ. 

ಈ ದಾಳಿ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳಾದ ಗಣೇಶ್ ಬಿ.ಸಿ., ಆಂಜನೇಯ ಪಾಟೀಲ್, ಚಂದ್ರಕಾಂತ್, ಸುರೇಶ್, ಪ್ರಮೋದಿನಿ ಹಾಗೂ ಹೆಚ್.ಬಿ. ದೊಡ್ಡಮನಿ ಪಾಲ್ಗೊಂಡಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor