ಎಳ್ಳಮಾವಾಸೆ ಜಾತ್ರೆ ಮುಗಿಸಿ ಬರುವಾಗ ಅಪಘಾತ, ಓರ್ವನಿಗೆ ಗಂಭೀರ ಗಾಯ  

ರಿಪ್ಪನ್​ ಪೇಟೆ :   ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಭಾನುವಾರ ತಡರಾತ್ರಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. 

Ripponpete Accident Car Collides with Lorry
Ripponpete Accident Car Collides with Lorry

ತುಮಕೂರಿನ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು, ಈತನ ಬಗ್ಗೆ ತಿಳಿದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ

ಮಾದಾಪುರ ಸಮೀಪದ ಲಕ್ಕುವಳ್ಳಿ ಗ್ರಾಮದ ಯುವಕರು ತೀರ್ಥಹಳ್ಳಿಯ ಎಳ್ಳಮಾವಾಸೆ ಜಾತ್ರೆ ಮುಗಿಸಿಕೊಂಡು ಮಾರುತಿ ವ್ಯಾಗನರ್ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಯು ವಿನಾಯಕ ವೃತ್ತದ ಬಳಿ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಂಭೀರವಾಗಿ  ಗಾಯಗೊಂಡ ಓರ್ವ ಯುವಕನನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಯುವಕನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Ripponpete Accident Car Collides with Lorry

Ripponpete Accident Car Collides with Lorry