ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ಭಯಾನಕ ಘಟನೆಯೊಂದು ಸಂಭವಿಸಿದೆ. ಪ್ರಶಾಂತ್ ಎಂಬ ಯುವಕ ಮಚ್ಚು (ಲಾಂಗ್) ಹಿಡಿದು ರಸ್ತೆಯಲ್ಲಿ ಅಟ್ಟಹಾಸ ಮೆರೆದಿದ್ದಾನೆ ಎನ್ನಲಾಗಿದ್ದು, ಈ ಘಟನೆಯಲ್ಲಿ ಹುತ್ತಳ್ಳಿ ಮೂಲದ ಯುವಕನೊಬ್ಬ ಗಾಯಗೊಂಡಿದ್ದಾನೆ.
ನಡೆದಿದ್ದೇನು?
ಭಾನುವಾರ ರಾತ್ರಿ ಪ್ರಶಾಂತ್ ಎಂಬಾತ ಏಕಾಏಕಿ ಲಾಂಗ್ ಹಿಡಿದು ಸಾರ್ವಜನಿಕರನ್ನು ಬೆದರಿಸಲು ಶುರು ಮಾಡಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ಹೋಗುವವರ ಮೇಲೆ ದಾಳಿ ಮಾಡಲು ಯತ್ನಿಸುತ್ತಿದ್ದ ಈತನ ಅಟ್ಟಹಾಸ ಕಂಡು ಗರ್ತಿಕೆರೆ ಜನತೆ ಆತಂಕಕ್ಕೀಡಾಗಿದ್ದರು. ಈ ವೇಳೆ ಹುತ್ತಳ್ಳಿ ಗ್ರಾಮದ ಸಚಿನ್ ಎಂಬವರ ಮೇಲೆ ದಾಳಿ ನಡೆಸಿದ್ದು, ಅವರ ಮುಖಕ್ಕೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಸದ್ಯ ಅವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಾಂಗ್ ಝಳಪಿಸುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿ ಪ್ರಶಾಂತ್‌ನನ್ನು ವಶಕ್ಕೆ ಪಡೆದಿದೆ.
Ripponpete news Gartikere long machete attack

Ripponpete news Gartikere long machete attack

