Road accident ಬೈಕ್ಗೆ ಡಿಕ್ಕಿ ಹೊಡೆದ ಬಸ್, ಸವಾರ ಸ್ಥಳದಲ್ಲೇ ಸಾವು
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಬೈಕ್ ಸವಾರನಿಗೆ ಹಿಂಬದಿಯಿಂದ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಅಬ್ದುಲ್ ರೆಹಮಾನ್ (44 ವರ್ಷ ) ಮೃತ ದುರ್ದೈವಿಯಾಗಿದ್ದಾರೆ. ಅಬ್ದುಲ್ ರೆಹಮಾನ್ ಅವರು ತಮ್ಮ ಸ್ಕೂಟರ್‌ನಲ್ಲಿ ಬೆಜ್ಜವಳ್ಳಿಯ ಸಮಕಾನಿ ರಸ್ತೆಯಲ್ಲಿ ತೆರಳುತ್ತಿದ್ದಾಗ, ಹಿಂಬದಿಯಿಂದ ಬಂದ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಅಬ್ದುಲ್ ರೆಹಮಾನ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
