SHIVAMOGGA NEWS TODAY

ಬರೋಬ್ಬರಿ 6 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ವ್ಯಕ್ತಿ ಕೊನೆಗೂ ಬಂಧನ. ಆತ ಮಾಡಿದ್ದ ಕೃತ್ಯ ಏನು

Shimoga
Shimoga
ಶೇರ್ ಮಾಡಿ WhatsApp Facebook X

ಶಿವಮೊಗ್ಗ: ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾವಣಗೆರೆ ನಿವಾಸಿ ಶೋಯಬ್ ಬಂಧಿತ ಆರೋಪಿ.

ಶಿವಮೊಗ್ಗ-ಬೆಂಗಳೂರು ವಿಮಾನ! ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ರಿಕ್ವೆಸ್ಟ್! ಬಿಗ್​ ಅಪ್​ಡೆಟ್​ನ ಡಿಟೇಲ್ಸ್​

ಘಟನೆಯ ಹಿನ್ನೆಲೆ

ಕಳೆದ ಆರು ವರ್ಷಗಳ ಹಿಂದೆ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಗಾಯಗೊಳಿಸಿದ ಆರೋಪ ಶೋಯಬ್ ಮೇಲಿತ್ತು. ಈ ಸಂಬಂಧ ಆತನ ವಿರುದ್ಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ, ಆರೋಪಿಯು ಕಳೆದ 6 ವರ್ಷಗಳಿಂದ ನ್ಯಾಯಾಲಯದ ಯಾವುದೇ ವಿಚಾರಣೆಗೂ ಹಾಜರಾಗದೆ ಸತತವಾಗಿ ತಲೆಮರೆಸಿಕೊಂಡಿದ್ದನು.

ಆರೋಪಿಯ ಪತ್ತೆಗಾಗಿ ಜಾಲಾಡುತ್ತಿದ್ದ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ (HC) ನಾಗರಾಜ್ ಹಾಗೂ ಸಿಪಿಸಿ (CPC) ಎಂ. ಗೋಪನಾಳ ಅವರು ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Road Accident Accused Arrested in Shikaripura

Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor