Road accident, ಸೊರಬ: ಸೊರಬ ಮತ್ತು ಸಾಗರ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಹಿಂಬದಿ ಸವಾರ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಸುನಿಲ್ (28) ಎಂದು ಗುರುತಿಸಲಾಗಿದೆ.
ಆಗಸ್ಟ್ 13ರಂದು ಇಬ್ಬರು ಯುವಕರು ಸಾಗರದಿಂದ ಸೊರಬಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದೂಗೂರು ಗ್ರಾಮ ಪಂಚಾಯಿತಿ ಮುಂಭಾಗದ ರಸ್ತೆಯಲ್ಲಿ ಬೈಕ್ ಸವಾರ ಅತಿ ವೇಗವಾಗಿ ಬಂದು, ದಿಢೀರನೆ ಬ್ರೇಕ್ ಹಾಕಿದ ಕಾರಣ ಬೈಕ್ ನಿಯಂತ್ರಣ ಕಳೆದುಕೊಂಡಿದೆ ಎನ್ನಲಾಗಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಹಿಂಬದಿ ಕುಳಿತಿದ್ದ ಸುನಿಲ್ ಅವರ ತಲೆ ಮತ್ತು ಮುಖಕ್ಕೆ ಗಂಭೀರ ಪೆಟ್ಟು ಬಿದ್ದು ಅಸ್ವಸ್ಥರಾಗಿದ್ದರು. ಅವರನ್ನು ತಕ್ಷಣವೇ ಸಾಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ : ಸವಾರ ಸ್ಥಳದಲ್ಲೇ ಸಾವು https://malenadutoday.com/bike-accident-in-bhadravathi/
ಈ ಘಟನೆ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Road accident
