royal challengers bangalore :  ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರಿಗೆ ಪರಿಹಾರ ಘೋಷಿಸಿದ RCB

prathapa thirthahalli
Prathapa thirthahalli - content producer

royal challengers bangalore :  ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ RCB

ಆರ್​ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಕೊಡುವುದಾಗಿ ಆರ್​ಸಿಬಿ ಮ್ಯಾನೇಜ್​ಮೆಂಟ್​ ಘೋಷಿಸಿದೆ.

royal challengers bangalore : 18 ವರ್ಷಗಳ ಬಳಿಕ ಆರ್​ಸಿಬಿ ಕಪ್​ ಗೆದ್ದಿದ್ದು ಇದರ ಸಲುವಾಗಿ  ಜೂನ್​ 04 ರಂದು  ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ವಿಜಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿ ತಮ್ಮ ನೆಚ್ಚಿನ ಕ್ರೀಡಾಪಟುಗಳನ್ನು ನೋಡಲು 2 ಲಕ್ಷಕ್ಕೂ ಹೆಚ್ಚಿನ ಅಭಿಮಾನಿಗಳು ಜಮಾಯಿಸಿದರು. ಈ ಹಿನ್ನಲೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿದ್ದರು. ಈ ಹಿನ್ನಲೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ಘೊಷಿಸಿದೆ. ಇದರ ನಡುವೆ  ಆರ್​ಸಿಬಿ ತಂಡದ ಮ್ಯಾನೇಜ್​ಮೆಂಟ್​ ಪ್ರತಿ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವಂತೆ ಘೊಷಿಸಿದ್ದು, ಕಾಲ್ತುಳಿತದಿಂದ ಗಾಯಗೊಂಡವರನ್ನು ಬೆಂಬಲಿಸಲು ಕೇರ್ಸ್​​ ಎಂಬ ನಿಧಿಯನ್ನು ರಚಿಸಿದೆ.

royal challengers bangalore : ಈ ಕುರಿತು ತನ್ನ x ಖಾತೆಯಲ್ಲಿ ಪೋಸ್ಟ್​ ಮಾಡಿರುವ  ಮ್ಯಾನೇಜ್​ಮೆಂಟ್​ ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ಬಹಳಷ್ಟು ದುಃಖ ಮತ್ತು ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಆರ್‌ಸಿಬಿ ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಾವು ಮಾಡುವ ಎಲ್ಲದರಲ್ಲೂ ನಮ್ಮ ಅಭಿಮಾನಿಗಳು ಯಾವಾಗಲೂ ಹೃದಯಭಾಗದಲ್ಲಿರುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ ಎಂದು ಬರೆದುಕೊಂಡಿದೆ.

Share This Article