SHIVAMOGGA NEWS TODAY

ಶಿವಮೊಗ್ಗ ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿದ ಪ್ರಯಾಣಿಕ: ಆರ್‌ಪಿಎಫ್ ಇನ್‌ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ಉಳಿತು ಜೀವ 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಮನುಷ್ಯನ ಆಯಸ್ಸು ಗಟ್ಟಿಯಾಗಿದ್ದರೆ ಭಗವಂತ ಯಾವುದಾದರೂ ಒಂದು ರೂಪದಲ್ಲಿ ಬಂದು ಪ್ರಾಣ ಕಾಪಾಡುತ್ತಾನೆ ಎಂಬುದಕ್ಕೆ ಶಿವಮೊಗ್ಗದಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಾಗಿದೆ. ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿದ್ದ ವ್ಯಕ್ತಿಯೊಬ್ಬರನ್ನು ಆರ್‌ಪಿಎಫ್ (RPF) ಇನ್‌ಸ್ಪೆಕ್ಟರ್ ತಮ್ಮ ಸಮಯಪ್ರಜ್ಞೆಯಿಂದ ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

RPF Inspector ಘಟನೆ ನಡೆದಿದ್ದು ಹೇಗೆ?

ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕನೊಬ್ಬ ಸಾಹಸ ಮಾಡಿದ್ದಾನೆ. ಈ ಸಂದರ್ಭದಲ್ಲಿ ರೈಲು ವೇಗವನ್ನು ಪಡೆದುಕೊಂಡಿದ್ದರಿಂದ ಆತನ ಸಮತೋಲನ ತಪ್ಪಿ ಕೆಳಗೆ ಬೀಳುವಂತಾಗಿದ್ದಾನೆ. ಅಪಾಯದಲ್ಲಿದ್ದ ಪ್ರಯಾಣಿಕನನ್ನು ತಕ್ಷಣವೇ ಗಮನಿಸಿದ ಆರ್‌ಪಿಎಫ್ ಇನ್‌ಸ್ಪೆಕ್ಟರ್ ಬಿ.ಕೆ. ಪ್ರಕಾಶ್ ಅವರು ತತ್‌ಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಯಾಣಿಕ ಇನ್ನೇನು ಕೆಳಗೆ ಬಿದ್ದು ಪ್ರಾಣ ಕಳೆದುಕೊಳ್ಳಬೇಕು ಎನ್ನುವಷ್ಟರಲ್ಲಿ ಜಾಣ್ಮೆಯಿಂದ ಆತನನ್ನು ಸುರಕ್ಷಿತವಾಗಿ ಬೋಗಿಯ ಒಳಗೆ ತಳ್ಳಿದ್ದಾರೆ.

ದೂರದಿಂದಲೇ ಓಡಿ ಬಂದು ಪ್ರಯಾಣಿಕನ ಜೀವ ರಕ್ಷಣೆ ಮಾಡಿದ ಆರ್‌ಪಿಎಫ್ ಇನ್‌ಸ್ಪೆಕ್ಟರ್ ಬಿ.ಕೆ. ಪ್ರಕಾಶ್ ಅವರ ಈ ಕಾರ್ಯವು ರೈಲ್ವೆ ನಿಲ್ದಾಣದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜನಸಾಮಾನ್ಯರ ರಕ್ಷಣೆಗೆ ನಿಂತ ಇನ್‌ಸ್ಪೆಕ್ಟರ್ ಕಾರ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

RPF Inspector BK Prakash Saves Passenger’s Life

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.