ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗದ ಗಾಡಿಕೊಪ್ಪದಲ್ಲಿ ಮನೆಯೊಂದರ ನೀರಿನ ಡ್ರಮ್ ಕೆಳಗೆ ಸೇರಿಕೊಂಡಿದ್ದ ವಿಷಪೂರಿತ ಕೊಳಕುಮಂಡಲ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ.
ಹಾವು ಸೇರಿರುವ ಕುರಿತಾಗಿ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಅವರು ಹಾವನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 4 ಅಡಿ ಉದ್ದದ ವಿಷಪೂರಿತ ಕೊಳಕುಮಂಡಲ ಹಾವು ಕಂಡುಬಂದಿದೆ.
ಅದನ್ನು ಕಾರ್ಯಾಚರಣೆ ನಡೆಸಿ ಸೆರೆಹಿಡಿದ ಅವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
