SAD NEWS / ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

ಇವತ್ತು ಬೆಳಗ್ಗೆ ಸಾಗರ ಜ್ಯೂನಿಯರ್ ಕಾಲೇಜಿಗೆ ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಹಿಂದಿನಿಂದ ಬಂದಿದ್ದ ಲಾರಿ ಡಿಕ್ಕಿ ಹೊಡೆದಿತ್ತು.

SAD NEWS / ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

ಶಿವಮೊಗ್ಗ ಜಿಲ್ಲೆ (shivamogga)  ಸಾಗರ ಪೇಟೆ (sagara town) ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ ಎಂಬ ಸುದ್ದಿ ಲಭ್ಯವಾಗಿದೆ. 

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ಧಾಳೆ ಎಂಬ ಮಾಹಿತಿ ಲಭ್ಯವಾಗಿದೆ. 

ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್​ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ

ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ (shikaripura) ಹಾಗೂ ಸೊರಬ (soraba) ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. 

ಕಣ್ಣೆದುರೇ ಸಂಭವಿಸಿದ ಅಪಘಾತದ ಬಗ್ಗೆ ಸ್ಥಳೀಯರ ಆತಂಕ ವ್ಯಕ್ತಪಡಿಸಿದ್ದು, ಲಾರಿ ವೇಗವಾಗಿ ಬರುತ್ತಿತ್ತು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಆಕ್ರೋಶ ಹೊರಹಾಕಿದ್ಧಾರೆ. 

ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್​ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ

ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ/ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ